ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಮರು ಮತದಾನಕ್ಕೆ ಆಸ್ಪದ ನೀಡಬೇಡಿ

Rashmi Kasaragodu
Updated On : 31 Mar 2014, 2:00 am

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೂ ಮರು ಮತದಾನವಾದ ಉದಾಹರಣೆ ಇಲ್ಲ. ಈ ಬಾರಿಯೂ ಅದೇ ರೀತಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವಿಪುಲ್ ಬನ್ಸಲ್ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾದ ಸಿಬ್ಬಂದಿಗೆ ಕರೆ ನೀಡಿದ್ದಾರೆ.
ನಗರದ ಕುವೆಂಪು ರಂಗಮಂದಿರದಲ್ಲಿ ಭಾನುವಾರ ಶಿವಮೊಗ್ಗ ನಗರದ ಪಿಆರ್‌ಓ ಮತ್ತು ಎಪಿಆರ್‌ಓಗಳಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮತದಾನ ಪ್ರಕ್ರಿಯೆಯಲ್ಲಿ ಯಾವುದೇ ಲೋಪದೋಷ ಆಗದಂತೆ ಪಿಆರ್‌ಓಗಳು ಮುಂಜಾಗ್ರತೆ ವಹಿಸಬೇಕು. ಮತದಾನ ಪ್ರಕ್ರಿಯೆ ಸುಸೂತ್ರವಾಗಿ ನಡೆದಲ್ಲಿ ಮಾತ್ರ ಎಲ್ಲಾ ಶ್ರಮ ಸಾರ್ಥಕವಾಗುತ್ತದೆ ಎಂದರು.
ತರಬೇತಿ ಪಡೆದವರು ಜವಾಬ್ದಾರಿ ಅರಿತು ಯಾವುದೇ ಗೊಂದಲ ಉಂಟಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಮತಯಂತ್ರ ಬಳಕೆ ತರಬೇತಿ: ನಗರದ ಆಚಾರ್ಯ ತುಳಸಿ ವಾಣಿಜ್ಯ ಕಾಲೇಜಿನಲ್ಲಿ ಸೆಕ್ಟರ್ ಅಧಿಕಾರಿಗಳು ಪಿಆರ್‌ಓ ಮತ್ತು ಎಪಿಆರ್‌ಓಗಳಿಗೆ ಎಲೆಕ್ಟ್ರಾನಿಕ್ ಮತಯಂತ್ರ ಬಳಕೆ ಬಗ್ಗೆ ತರಬೇತಿ ನೀಡಲಾಯಿತು. ತರಬೇತಿಯಲ್ಲಿ ಶಿವಮೊಗ್ಗ ನಗರದಿಂದ ಸುಮಾರು 368 ಪಿಆರ್‌ಓ ಮತ್ತು 394 ಎಪಿಆರ್‌ಓಗಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಹಾಯಕ ಚುನಾವಣಾಧಿಕಾರಿ ಕರಭೀಮಣ್ಣನವರ್, ಪ್ರಮುಖ ಅಧಿಕಾರಿಗಳಾದ ರವಿ, ವೀರೇಶ್ ಮತ್ತಿತರರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement