ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಸಾಧನೆಗೆ ಆತ್ಮವಿಶ್ವಾಸ ಮುಖ್ಯ

Rashmi Kasaragodu
Updated On : 31 Mar 2014, 2:00 am

ಕ.ಪ್ರ.ವಾರ್ತೆ    ಚಿಕ್ಕಮಗಳೂರು    ಮಾ. 30
ಯುವ ಜನತೆ ಬದುಕಿನಲ್ಲಿ ಉನ್ನತಿ ಹೊಂದಿ ಸಮಾಜದಲ್ಲಿ ಉತ್ತಮ ಸ್ಥಾನಮಾನ ಗಳಿಸಬೇಕಾದರೆ ಆತ್ಮ ವಿಶ್ವಾಸ ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ತೇಗೂರು ಜಗದೀಶ್ ಹೇಳಿದರು.
ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕ, ತುಮಕೂರಿನ ಪ್ರಗತಿ ಟ್ರೈನಿಂಗ್ ಇನ್‌ಸ್ಟಿಟ್ಯೂಟ್ ನಗರದ ಸ್ಕೌಟ್ಸ್ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಉಚಿತ ಮೊಬೈಲ್ ರಿಪೇರಿ ಕಂಪ್ಯೂಟರ್ ಹಾರ್ಡ್‌ವೇರ್, ಬ್ಯೂಟಿಷಿಯನ್, ಸಿ.ಸಿ. ಕ್ಯಾಮೆರಾ ಫಿಕ್ಸಿಂಗ್ ಮತ್ತು ಕರಕುಶಲ ವಸ್ತುಗಳ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಕ್ಯೂರೇಟ್ ಇನ್ ಲಾಸಲ್ಯೂಷನ್ ಸಂಸ್ಥೆಯ ವ್ಯವಸ್ಥಾಪಕ ಶರತ್ ಕುಮಾರ್ ಮಾತನಾಡಿ, ಯುವ ಜನತೆ ಬದುಕಿನಲ್ಲಿ ಮುಂದೆ ಬರಬೇಕಾದರೆ ಸಂಕೋಚ, ಭಯ ಬಿಟ್ಟು ಯಾವುದಾದರೂ ವೃತ್ತಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಪ್ರಗತಿ ಟ್ರೈನಿಂಗ್ ಇನ್‌ಸ್ಟಿಟ್ಯೂಟ್‌ನ ಅಧ್ಯಕ್ಷ ಎಸ್.ಆರ್. ಸಂದರ್ಶ್ ಮಾತನಾಡಿ, ತರಬೇತಿ ಶಿಬಿರಕ್ಕೆ ಎಲ್ಲಾ ರೀತಿಯ ಸಹಕಾರ ನೀಡಿದ ರಕ್ಷಣಾ ವೇದಿಕೆಗೆ ಕೃತಜ್ಞತೆ ಸಲ್ಲಿಸಿದರು. ಶಿಬಿರದಲ್ಲಿ ತರಬೇತಿ ಪಡೆದವರಿಗೆ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಲಾಯಿತು.
ರಕ್ಷಣಾ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಂಚಾಕ್ಷರಿ, ನಗರಾಧ್ಯಕ್ಷ ವಿನೋದ್ ಕುಮಾರ್, ಉಪಾಧ್ಯಕ್ಷ ಕುಮಾರ್, ತರಬೇತುದಾರರಾದ ಶಿವರಾಂ, ಛಾಯಾ, ಬಿ.ಎಂ. ಶೃತಿ ಉಪಸ್ಥಿತರಿದ್ದರು. ಚಿಕ್ಕಮಗಳೂರಿನ ಸ್ಕೌಟ್ ಭವನದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ತೇಗೂರು ಜಗದೀಶ್ ತರಬೇತಿ ಪಡೆದವರಿಗೆ ಪ್ರಮಾಣಪತ್ರವನ್ನು ವಿತರಣೆ ಮಾಡಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement