ಶೂಟೌಟ್ಗೆ ಖಂಡನೆ
ಚಿಕ್ಕಮಗಳೂರು: ತನಿಕೋಡಿನಲ್ಲಿ ನಡೆದ ಶೂಟೌಟ್ನಲ್ಲಿ ಕಬೀರ್ ಎಂಬುವವರನ್ನು ಹತ್ಯೆ ಮಾಡಿರುವುದನ್ನು ಸಿಪಿಐ ಜಿಲ್ಲಾ ಕಾರ್ಯದರ್ಶಿ ರೇಣುಕಾರಾಧ್ಯ ಖಂಡಿಸಿದ್ದಾರೆ.
ಕಬೀರನನ್ನು ಬಂಧಿಸಲು ಬಹಳಷ್ಟು ಅವಕಾಶವಿದ್ದರೂ ಸಹ ಬಂದೂಕಿನಿಂದ ಗುಂಡಿಟ್ಟು ಕೊಂದಿರುವುದು ಅನುಮಾನಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಇಂತಹ ಸೂಕ್ಷ್ಮ ಸ್ಥಳದಲ್ಲಿ ಕೆಲಸ ನಿರ್ವಹಿಸುವ ಅಧಿಕಾರಿಗಳಿಗೆ ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸುವಂತೆ ಸೂಚಿಸಬೇಕು ಎಂದು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ. ಈ ಪ್ರಕರಣದ ಲಾಭ ಪಡೆಯಲು ಹಿಂದೂ ಹಾಗೂ ಮುಸ್ಲಿಂ ಮೂಲಭೂತವಾದಿ ಸಂಘಟನೆಗಳು ಹವಣಿಸುತ್ತಿರುವುದು ಅಪಾಯಕಾರಿ ಬೆಳವಣಿಗೆ ಆಗಿರುತ್ತದೆ. ಇಂತಹ ಕೋಮುವಾದಿ ಸಂಘಟನೆಗಳ ಮೇಲೆ ಸರ್ಕಾರ ನಿಗಾ ವಹಿಸಬೇಕೆಂದು ಒತ್ತಾಯಿಸಿದ್ದಾರೆ.