ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಸಿಇಟಿ; ಪರೀಕ್ಷಾ ಕೇಂದ್ರಗಳ ಪರಿಶೀಲಿಸಿದ ಡಿಸಿ

Rashmi Kasaragodu
Updated On : 2 May 2014, 11:19 am

ಚಿಕ್ಕಮಗಳೂರು: ನಗರದಲ್ಲಿ ಗುರುವಾರದಿಂದ ಸಿಇಟಿ ಪರೀಕ್ಷೆಗಳು ಆರಂಭವಾಗಿವೆ. ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ನಗರದ ಬೇಲೂರು ರಸ್ತೆಯ ಸರ್ಕಾರಿ ಜೂನಿಯರ್ ಕಾಲೇಜು ಮತ್ತು ಎಂಇಎಸ್ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿ ಅವರು ಪರೀಕ್ಷೆಗಳು ಸುಸೂತ್ರವಾಗಿ ನಡೆಯುತ್ತಿರುವ ಬಗ್ಗೆ ಪರಿಶೀಲಿಸಿದರು.
ಜಿಲ್ಲೆಯಲ್ಲಿ ಈ 2 ಕಾಲೇಜುಗಳು ಅಲ್ಲದೆ ಬಸವನಹಳ್ಳಿ ಜೂನಿಯರ್ ಕಾಲೇಜಿನಲ್ಲಿಯೂ ಪರೀಕ್ಷೆ ನಡೆಯುತ್ತಿದೆ. ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ 529, ಎಂಇಎಸ್ ನಲ್ಲಿ 512 ಹಾಗೂ ಬಸವನಹಳ್ಳಿ ಜೂನಿಯರ್ ಕಾಲೇಜಿನಲ್ಲಿ 608 ವಿದ್ಯಾರ್ಥಿಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟಾರೆ 1639 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದಾರೆ.
ಗುರುವಾರ ನಡೆದ ಪರೀಕ್ಷೆಯಲ್ಲಿ 1639 ವಿದ್ಯಾರ್ಥಿಗಳ ಪೈಕಿ 251 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಜಿಲ್ಲೆಯ ವಿವಿಧೆಡೆಗಳಿಂದ ಕೆಲವು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಲ್ಗೊಳ್ಳಲು ಬುಧವಾರವೇ ನಗರಕ್ಕೆ ಆಗಮಿಸಿ ಉಳಿದುಕೊಂಡಿದ್ದರು.
ಜಿಲ್ಲಾಧಿಕಾರಿ ಅವರೊಂದಿಗೆ ಉಪ ವಿಭಾಗಾಧಿಕಾರಿ ಕೆ.ಚನ್ನಬಸಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಜಪ್ಪ, ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಲಕ್ಷ್ಮಣನಾಯಕ್ ಸೇರಿದಂತೆ ಇತರ ಅಧಿಕಾರಿಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement