ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಶ್ರೀನಿವಾಸ್ಗೆ ಬೀಳ್ಕೊಡುಗೆ

Rashmi Kasaragodu
Updated On : 4 May 2014, 1:55 am

ನರಸಿಂಹರಾಜಪುರ: ಸರ್ಕಾರಿ ಕೆಲಸವು ಸಾರ್ವಜನಿಕರ ಸೇವೆಯಾಗಿದ್ದು, ಸಾರ್ವಜನಿಕರೊಂದಿಗೆ ಸೌಹಾರ್ದಯುತವಾಗಿ ವರ್ತಿಸಬೇಕು ಎಂದು ಗ್ರೇಡ್ 2 ತಹಸೀಲ್ದಾರ್ ಲೋಕೇಶಪ್ಪ ಸಲಹೆ ನೀಡಿದರು.
ಇತ್ತೀಚೆಗೆ ನಿವೃತ್ತರಾದ ಪತ್ರಾಂಕಿತ ಉಪ ಖಜಾನಾಧಿಕಾರಿ ಶ್ರೀನಿವಾಸ್ ಅವರಿಗೆ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಉಪ ಖಜಾನಾಧಿಕಾರಿ ಶ್ರೀನಿವಾಸ್, ಕಳೆದ ನಾಲ್ಕು ವರ್ಷಗಳಿಂದಲೂ ಎಲ್ಲರ ಸಹಕಾರದಿಂದ ಉತ್ತಮ ಸೇವೆ ಸಲ್ಲಿಸಲು ಸಾಧ್ಯವಾಗಿದೆ. ಕಳೆದ 22 ವರ್ಷಗಳಿಂದ ವಿವಿಧ ತಾಲೂಕುಗಳ ಖಜಾನೆ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ್ದೇನೆ ಎಂದು ತೃಪ್ತಿ ವ್ಯಕ್ತಪಡಿಸಿದರು.
ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗೌಸ್ ಮೊಹಿದ್ದೀನ್ ಮಾತನಾಡಿದರು.
ಸಭೆಯಲ್ಲಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗುರುಶಾಂತಪ್ಪ, ಸರ್ಕಾರಿ ನೌಕರರ ಸಂಘದ ಸದಸ್ಯ ರವಿಕುಮಾರ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಗ್ರಂಥಪಾಲಕ ಕೃಷ್ಣಪ್ಪ, ಪ್ರಭಾರ ಉಪ ಖಜಾನಾಧಿಕಾರಿ ಗಂಗಾಧರಪ್ಪ ತಮ್ಮ ಅನಿಸಿಕೆ ವ್ಯಕ್ತಪಡಿಸಿಸಿದರು.


'ಸಮಾನತೆಗಾಗಿ ಹೋರಾಡಿದ ಶರಣರು'
ಬೀರೂರು: ಕಾಯಕವೇ ಕೈಲಾಸ, ನುಡಿದಂತೆ ನಡೆದಾಗ ಸಮಾಜದಲ್ಲಿ ಒಳ್ಳೆಯ ಬೆಳವಣಿಗೆಯನ್ನು ಕಾಣಲು ಸಾಧ್ಯ ಎಂದು ಪುರಸಭಾಧ್ಯಕ್ಷೆ ಗೀತಾ ಹೇಮಂತ್ ಹೇಳಿದ್ದಾರೆ.
ಬಸವ ಜಯಂತಿ ಅಂಗವಾಗಿ ಶುಕ್ರವಾರ ಪುರಸಭೆ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ತ್ರೀಸಮಾನತೆ ಆದ್ಯತೆ ನೀಡಿ ಮಹಿಳೆಯರನ್ನು ಗೌರವಿಸಿದಾಗ ಅವಳು ಅಬಲೆಯಲ್ಲ ಸಬಲೆ ಎಂಬುದನ್ನು ಬಸವಣ್ಣನವರು ಸಾರಿದ್ದಾರೆ ಎಂಬುದನ್ನು ನೆನಪಿಸಿ ಹಾಗೆಯೇ ಹೆಣ್ಣು ಮಕ್ಕಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಕರೆ ನೀಡಿದರು. ಪುರಸಭೆಯ ಮುಖ್ಯಾಧಿಕಾರಿ ಕೃಷ್ಣಮೂರ್ತಿ ಮಾತನಾಡಿದರು. ಲೋಕೇಶಪ್ಪ, ವಿಜಯೇಂದ್ರಬಾಬು, ಮಮತಾ ಹರೀಶ್, ದೇವರಾಜ್ ಮಾತನಾಡಿದರು. ನಾಗರಾಜು, ಶ್ರೀನಿವಾಸ್ ಮೂರ್ತಿ, ತಮ್ಮಣ್ಣ, ಲೋಕೇಶ್, ಪ್ರಕಾಶ್, ಮಲ್ಲಿಕಾರ್ಜುನ್, ಮಹೇಶ್ವರಪ್ಪ ಉಪಸ್ಥಿತರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement