ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಕಾಮಗಾರಿ ರಕ್ಷಣೆಗೆ ಸಿಎಂ ಸೂಚನೆ

Mainashree
Updated On : 9 May 2014, 11:11 am

ಚಿಕ್ಕಮಗಳೂರು: ಕರಗಡ ಯೋಜನೆಯ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ರಕ್ಷಣೆ ನೀಡಬೇಕು ಎಂದು ಮುಖ್ಯಮಂತ್ರಿಯವರು ಸೂಚಿಸಿದ್ದಾರೆ ಎಂದು ವಿಧಾನಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಹೇಳಿದ್ದಾರೆ.
ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಎಸ್. ಶಾಂತೇಗೌಡ ಮತ್ತು ತಾವು ಗುರುವಾರದಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಕಾಮಗಾರಿಗೆ ಅಡ್ಡಿಪಡಿಸುತ್ತಿರುವ ಬಗ್ಗೆ ಗಮನ ಸೆಳೆದಾಗ ಹಾಸನ ಜಿಲ್ಲಾಧಿಕಾರಿಗೆ ಫೋನಾಯಿಸಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕಾಮಗಾರಿಗೆ ಅಗತ್ಯ ರಕ್ಷಣೆಯನ್ನು ನೀಡಬೇಕು. ಕಾಮಗಾರಿ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಹೇಳಿದರು.
ಕೆಲವೆಡೆ ಅಡ್ಡಗಾಲು: ಕೆಲವರ ಪ್ರಚೋದನೆಯಿಂದಾಗಿ ರೈತರು ಕೆಲ ಕಡೆಗಳಲ್ಲಿ ದುರುದ್ದೇಶದಿಂದ ಬಂಡೆ ಸಿಡಿಸಲು ಮತ್ತು ಕಾಲುವೆ ನಿರ್ಮಾಣಕ್ಕೆ ಅಡ್ಡಿಪಡಿಸುವ ಉದ್ದೇಶದಿಂದ ದನಕರುಗಳನ್ನು ಬಿಡುತ್ತಿದ್ದಾರೆ. ಇದರಿಂದಾಗಿ ಕಾಮಗಾರಿ ಮಂದಗತಿಯಲ್ಲಿ ಸಾಗಲು ಕಾರಣವಾಗಿದೆ. ಇಲ್ಲವಾಗಿದ್ದಲ್ಲಿ ಮೇ ತಿಂಗಳ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳ್ಳಲಿತ್ತು ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ನೀರಾವರಿ ಇಲಾಖೆಯ ಎಂಜಿನಿಯರ್‌ಗೆ ಕಾಮಗಾರಿ ತ್ವರಿತಕ್ಕೆ ಮುಖ್ಯಮಂತ್ರಿ ಸೂಚಿಸಿದ್ದು, ಜೂನ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳ್ಳುವ ವಿಶ್ವಾಸವಿದೆ. ಹಲವು ದಶಕಗಳ ರೈತರ ಬೇಡಿಕೆ ಈ ಮೂಲಕ ಈಡೇರಿದಂತಾಗುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement