ದೃಶ್ಯಕಲಾ ಕಾಲೇಜಿಗೆ ಅರ್ಜಿ
ಚಿಕ್ಕಮಗಳೂರು: ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜಿನ ಪ್ರಥಮ ಮೂಲ ತರಗತಿ, ಪ್ರಥಮ ಬಿಎಫ್ಎ (ಚಿತ್ರಕಲೆ, ಶಿಲ್ಪಕಲೆ, ಅಚ್ಚುಕಲೆ (ಗ್ರಾಫಿಕ್ಸ್) ಅನ್ವಯಕಲೆ, ಛಾಯಾಚಿತ್ರ ಮತ್ತು ಛಾಯಾ ಪತ್ರಿಕೋದ್ಯಮ, ಕಲಾ ಇತಿಹಾಸ ಪ್ರಸ್ತುತ ಶೈಕ್ಷಣಿಕ ವರ್ಷದ ಸೇರ್ಪಡೆಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಥಮ ಮೂಲ ತರಗತಿಗೆ ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆ ಹಾಗೂ ಪ್ರಥಮ ಬಿಎಫ್ಎಗೆ ದ್ವಿತೀಯ ಮೂಲ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಜೂ.2 ಕೊನೆಯ ದಿನ. ಜೂ.10ರಂದು ಬೆಳಗ್ಗೆ 11 ಗಂಟೆಗೆ ಅರ್ಹತಾ ಪರೀಕ್ಷೆ ಹಾಗೂ ಮಧ್ಯಾಹ್ನ 2 ಗಂಟೆಗೆ ವೈಯಕ್ತಿಕ ಸಂದರ್ಶನ ನಡೆಸಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡೀನ್, ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು, ಸಯ್ಯಾಜಿರಾವ್ ರಸ್ತೆ, ಮೈಸೂರು. ದೂರವಾಣಿ ಸಂಖ್ಯೆ 0821-2438931 ಸಂಪರ್ಕಿಸಿ.