ಮೀನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ
ಚಿಕ್ಕಮಗಳೂರು: ಮೀನುಗಾರಿಕೆ ಇಲಾಖೆ ವತಿಯಿಂದ ಒಳನಾಡು ಮೀನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ತರಬೇತಿಗೆ ಸುಮಾರು 40 ಗ್ರಾಮೀಣ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. 2 ತಿಂಗಳು ನಡೆಯಲಿರುವ ತರಬೇತಿಗೆ ಪ್ರತಿ ಅಭ್ಯರ್ಥಿಗೆ ಮಾಸಿಕ 2000 ಶಿಷ್ಯ ವೇತನ ಕೊಡಲಾಗುವುದು. ಅರ್ಜಿ ಸಲ್ಲಿಸಲು ಜೂ.8 ಕೊನೆ ದಿನ.
ತರಬೇತಿ ಅವಧಿಯಲ್ಲಿ ಮೀನು ಮರಿ ಉತ್ಪಾದನೆ, ಪಾಲನೆ, ಹಂಚಿಕೆ, ಮೀನು ಸಾಕಣೆ, ಬಲೆ ಹೆಣೆಯುವುದು, ದುರಸ್ತಿ ಮಾಡುವುದು,
ಹರಿಗೋಲು ನಡೆಸುವುದು, ಮೀನು ಹಿಡಿಯುವುದು, ಅಲಂಕಾರಿಕ ಮೀನು ಉತ್ಪಾದನೆ, ಪಾಲನೆ, ಇತ್ತೀಚಿನ ಬೆಳವಣಿಗೆಗಳು ಮುಂತಾದ ವಿಷಯಗಳಲ್ಲಿ ತರಬೇತಿ ನೀಡಲಾಗುವುದು ಎಂದು ಮೀನುಗಾರಿಕೆ ಇಲಾಖೆ ಪ್ರಕಟಣೆ ತಿಳಿಸಿದೆ. ಅರ್ಜಿ ಮತ್ತು ಹೆಚ್ಚಿನ ಮಾಹಿತಿಗೆ ಸಮೀಪದ ಮೀನುಗಾರಿಕೆ ಇಲಾಖೆ ಕಚೇರಿ, ಅಥವಾ ದೂರವಾಣಿ ಸಂಖ್ಯೆ 08282-256252 ಇಲ್ಲಿಗೆ ಸಂಪರ್ಕಿಸಿ.