ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ
ಚಿಕ್ಕಮಗಳೂರು: ಕಡೂರು ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ನಡೆಯುತ್ತಿರುವ ಕೆಳಕಂಡ ಪ್ರಿ ಮೆಟ್ರಿಕ್ ವಿದ್ಯಾರ್ಥಿ ನಿಲಯಗಳು ಹಾಗೂ ಆಶ್ರಮ ಶಾಲೆಗಳಲ್ಲಿ ಪ್ರಸಕ್ತ ಸಾಲಿಗೆ ಖಾಲಿ ಇರುವ ಸ್ಥಾನಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಾರ್ವಜನಿಕ ಬಾಲಕರ ವಿದ್ಯಾರ್ಥಿ ನಿಲಯ ಕಡೂರು, ಬೀರೂರು, ಯಗಟಿ, ಎಮ್ಮೆದೊಡ್ಡಿ, ಸಖರಾಯಪಟ್ಟಣ, ಜೋಡಿಹೋಚಿಹಳ್ಳಿ, ಸಾರ್ವಜನಿಕ ಬಾಲಕಿಯರ ವಿದ್ಯಾರ್ಥಿ ನಿಲಯ ಕಡೂರು, ಬೀರೂರು, ಸಖರಾಯಪಟ್ಟಣ, ಹಿರೇನಲ್ಲೂರು, ದೇವನೂರು ಮತಿಘಟ್ಟ, ಗಿರಿಜನ ಬಾಲಕರ ವಿದ್ಯಾರ್ಥಿ ನಿಲಯ, ಸಿಂಗಟಗೆರೆ ಮತ್ತು ಗಿರಿಜನ ಆಶ್ರಮ ಶಾಲೆ, ಕಡೂರು ಇಲ್ಲಿ ಪ್ರವೇಶ ನೀಡಲಾಗುವುದು. ಪ್ರವೇಶ ಬಯಸುವ ವಿದ್ಯಾರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಸಂಬಂಧಿಸಿದ ವಿದ್ಯಾರ್ಥಿ ನಿಲಯದಲ್ಲಿ ಉಚಿತವಾಗಿ ಪಡೆಯಬಹುದು. ಅರ್ಜಿ ಸಲ್ಲಿಸಲು ಜೂ.7 ಅಂತಿಮ ದಿನ ಎಂದು ಕಡೂರಿನ ಸಮಾಜ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.