ಸಮವಸ್ತ್ರ ವಿತರಣೆ
ಶೃಂಗೇರಿ: ಜಗತ್ತಿನಲ್ಲಿಯೇ ಭಾರತೀಯ ಸಂಸ್ಕೃತಿ, ಮೌಲ್ಯ,ಪರಂಪರೆಗಳು ಅತ್ಯಂತ ಉನ್ನತವಾದುದು ಎಂದು ಶ್ರೀಮಠದ ಅಧಿಕಾರಿ ಶ್ರೀಪಾದರಾವ್ ಹೇಳಿದರು.
ಪಟ್ಟಣದ ಗೌರೀಶಂಕರ ಸಭಾಂಗಣದಲ್ಲಿ ಮೇ 25ರಂದು ಭಾರತ್ ವಿಕಾಸ್ ಪರಿಷತ್ ಹಾಗೂ ಶ್ರೀಮಠದ ಸಹಯೋಗದೊಂದಿಗೆ ನಡೆಯಲಿರುವ ಉಚಿತ ಸಾಮೂಹಿಕ ವಿವಾಹದ 15 ಜೋಡಿಗಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರತಿಯೊಂದು ಸೇವೆ ಪ್ರಾಮಾಣಿಕತೆ, ನಿಷ್ಠೆಯಿಂದ ಕೂಡಿದ್ದರೆ ಅದು ಸಮಾಜದ ಕಟ್ಟಕಡೆಯ ವರ್ಗದ ಜನರಿಗೆ ತಲುಪುತ್ತದೆ. ಸಂಸ್ಕಾರ, ಮೌಲ್ಯಗಳನ್ನು ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಅದನ್ನು ಉಳಿಸಿ ಬೆಳೆಸುವ ಕೆಲಸ ನಡೆಯಬೇಕಿದೆ ಎಂದರು.
ಭಾರತ್ ವಿಕಾಸ್ ಪರಿಷತ್ ಅಧ್ಯಕ್ಷ ಸತ್ಯನಾರಾಯಣ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಯನ ಮತ್ತಿತರರು ಇದ್ದರು. ಇದೇ ಸಂದರ್ಭದಲ್ಲಿ 15 ಜೋಡಿಗಳಿಗೆ ಸಮವಸ್ತ್ರ ವಿತರಿಸಲಾಯಿತು.