ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಬ್ಯಾರಿ ಭವನ ನಿರ್ಮಿಸಲು ಸರ್ಕಾರ ಸಿದ್ಧ

Vishwanath S
Updated On : 27 May 2014, 11:12 am

ಮೂಡಿಗೆರೆ: ರಾಜ್ಯದಲ್ಲಿ ಬ್ಯಾರಿ ಭಾಷಿಕರು ಅಧಿಕವಿರುವ ವಿವಿಧ ಜಿಲ್ಲೆಗಳಲ್ಲಿ ಬ್ಯಾರಿ ಭವನ ನಿರ್ಮಿಸಲು ಸರ್ಕಾರ ಸಿದ್ಧವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಭರವಸೆ ನೀಡಿದ್ದಾರೆ ಎಂದು ಕರ್ನಾಟಕ ಬ್ಯಾರಿ ಅಕಾಡಮಿ ಸದಸ್ಯ ಕಿರುಗುಂದ ಅಬ್ಬಾಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನ ವಿಧಾನಸೌಧದಲ್ಲಿರುವ ಬ್ಯಾಂಕ್ವೇಟ್ ಹಾಲ್‌ನಲ್ಲಿ  ಮೇ 23 ಮತ್ತು 24ರಂದು ನಡೆದ ಕರ್ನಾಟಕ ಬ್ಯಾರಿ ಅಕಾಡಮಿ ಸಭೆಯಲ್ಲಿ ಅಕಾಡಮಿ ಅಧ್ಯಕ್ಷರು ಮತ್ತು ಸದಸ್ಯರ ಕೋರಿಕೆಗಳಿಗೆ ಸಚಿವರು ಈ ರೀತಿ ಪ್ರತಿಕ್ರಿಯೆ ವ್ಯಕ್ತಪಡಿಸಿರುವುದಾಗಿ ತಿಳಿಸಿದ್ದಾರೆ.
ಮಂಗಳೂರಲ್ಲಿ ಸ್ವಂತ ಕಟ್ಟಡ: ಬ್ಯಾರಿ ಅಕಾಡಮಿಗೆ ಬ್ಯಾರಿ ಭವನ ಮತ್ತು ಸ್ವಂತ ಕಟ್ಟಡದಲ್ಲಿ ಕಚೇರಿ ವ್ಯವಸ್ಥೆ ಇಲ್ಲ. ಖಾಸಗಿ ಕಟ್ಟಡದಲ್ಲಿ ಕಚೇರಿ ನಡೆಯುತ್ತಿದೆ. ಆದ್ದರಿಂದ ಸರ್ಕಾರ ಬ್ಯಾರೀ ಅಕಾಡಮಿಗೆ ಸ್ವಂತ ಕಟ್ಟಡ ಒದಗಿಸಬೇಕೆಂಬ ಅಧ್ಯಕ್ಷರು ಮತ್ತು ಸದಸ್ಯರ ಬೇಡಿಕೆಗಳಿಗೆ ಸ್ಪಂದಿಸಿದ ಸಚಿವರು, ಮಂಗಳೂರನ್ನು ಕೇಂದ್ರವಾಗಿ ಇಟ್ಟುಕೊಂಡು ಬ್ಯಾರಿ ಅಕಾಡಮಿ ಭವನ ಮತ್ತು ಕಚೇರಿ ತೆರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಬ್ಯಾರಿ ಸಮುದಾಯದ ಸಾಂಪ್ರದಾಯಿಕ ಕಲೆಗಳು, ಸಾಹಿತ್ಯ ಚಟುವಟಿಕೆಗಳಿಗೆ ಸರ್ಕಾರ ಉತ್ತೇಜನ ನೀಡಲಿದೆ. ಭಾಷೆಯನ್ನು ಮಾನ್ಯತಾ ಪಟ್ಟಿಗೆ ಸೇರಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.
 ಸಭೆಯಲ್ಲಿ ಅಕಾಡಮಿ ಅಧ್ಯಕ್ಷ ಬಿ.ಎ. ಮೊಹಮ್ಮದ್ ಹನೀಫ್ ಇತರರು ಇದ, ಅಬ್ಬಾಸ್, ಗೋಳ್ತಮಜಲು, ಕಿರುಗುಂದ ಅಬ್ಬಾಸ್, ಯೂಸುಫ್ ಅಕ್ತಾರ್, ಇದ್ದಿನಬ್ಬ ಬ್ಯಾರಿ, ಖಾಲೀದ್, ಹಮೀದ್ ಪಡುಬಿದ್ರಿ, ಮಹಮ್ಮದ್ ಫೌರ್ದೌಸ್, ಖಾಸೀಂ ಉಳ್ಳಾಲ್, ಬದ್ರುದ್ದೀನ್,  ಸಹಿತ ವಿವಿಧ ಅಧಿಕಾರಿಗಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement