ಪಟ್ಟಣದ ಅಭಿವೃದ್ಧಿಗೆ ಶ್ರಮಿಸಿ
ನರಸಿಂಹರಾಜಪುರ: ಪಟ್ಟಣ ಪಂಚಾಯ್ತಿಯ ಸದಸ್ಯರು ಗುಂಪುಗಾರಿಕೆ ಮಾಡದೆ ಪಟ್ಟಣದ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಂ. ಶ್ರೀನಿವಾಸ್ ಸಲಹೆ ನೀಡಿದರು.
ಶುಕ್ರವಾರ ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಲೇಖಾ ವಸಂತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ಪಟ್ಟಣ ಪಂಚಾಯ್ತಿ ಅಭಿವೃದ್ಧಿಗೆ ನನ್ನ ಎಲ್ಲಾ ಸಹಕಾರ ನೀಡಲಿದ್ದೇನೆ. ನರಸಿಂಹರಾಜಪುರ ಪಟ್ಟಣ ಅಭಿವೃದ್ಧಿ ಹೊಂದುತ್ತಿದ್ದು, ಮತ್ತಷ್ಟು ಅಭಿವೃದ್ಧಿಗೆ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದರು.
ಇದೇ ಸಂದರ್ಭದಲ್ಲಿ ಪಪಂ ವತಿಯಿಂದ ವಿಧಾನ ಪರಿಷತ್ ಸದಸ್ಯ ಎಂ.ಶ್ರೀನಿವಾಸ್ ಅವರನ್ನು ಅಭಿನಂದಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಪಪಂ ಅಧ್ಯಕ್ಷೆ ಲೇಖಾ ವಸಂತ್ ವಹಿಸಿದ್ದರು. ಉಪಾಧ್ಯಕ್ಷ ಅಬ್ದುಲ್ ಬಾನ್, ಮುಖ್ಯಾಧಿಕಾರಿ ರಾಮರುದ್ರಯ್ಯ ಉಪಸ್ಥಿತರಿದ್ದರು.