ಖಾಸಗಿ ಸುದ್ದಿ ವಾಹಿನಿಯ ಕ್ಯಾಮರಾಮನ್ ಆತ್ಮಹತ್ಯೆ
ಚಿತ್ರದುರ್ಗ: ಖಾಸಗಿ ಸುದ್ದಿವಾಹಿನಿಯ ಕ್ಯಾಮರಾಮನ್ ಎಸ್.ಪಿ. ಚಂದ್ರಣ್ಣ (37) ಇಲ್ಲಿನ ಪ್ರವಾಸಿ ಮಂದಿರದಲ್ಲಿ ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅನಾರೋಗ್ಯ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಚೀಟಿ ಬರೆದಿಟ್ಟಿದ್ದಾರೆ. ನಗರ ಠಾಣೆಯಲ್ಲಿ ದೂರು ದಾಖಲಿಸಿರುವ ಚಂದ್ರಣ್ಣ ಅವರ ಪತ್ನಿ ತಾರಾದೇವಿ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಹಲವಾರು ವರ್ಷಗಳಿಂದ ಖಾಸಗಿ ಸುದ್ದಿವಾಹಿನಿಯ ಕ್ಯಾಮರಾಮನ್ ಆಗಿ ಕೆಲಸ ಮಾಡುತ್ತಿದ್ದರು. ಮೃತರ ಅಂತ್ಯಕ್ರಿಯೆ ಹೊಳಲ್ಕೆರೆ ರಸ್ತೆಯ ಸ್ಮಶಾನದಲ್ಲಿ ಗುರುವಾರ ಸಂಜೆ ನೆರವೇರಿತು.
ಮಾದಾರ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಛಲವಾದಿ ಗುರುಪೀಠದ ಶ್ರೀ ಬಸವನಾಗೀದೇವ ಸ್ವಾಮೀಜಿ ಮತ್ತು ಮುರುಘರಾಜೇಂದ್ರ ಒಡೆಯರ್, ಶ್ರೀರಾಮ್ ಇನ್ನಿತರೆ ಮುಖಂಡರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.
ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು ಚಂದ್ರಣ್ಣನ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜಿಪಂ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ನಗರಸಭೆ ಮಾಜಿ ಅಧ್ಯಕ್ಷ ಬಿ. ಕಾಂತರಾಜು, ನಿರಂಜನಮೂರ್ತಿ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲೆಯ ಎಲ್ಲ ಪತ್ರಕರ್ತರು ಸಂತಾಪ ಸೂಚಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.