ನಿಲ್ಲದ ಅಕ್ರಮ ಮರಳು ಸಾಗಾಣಿಕೆ
ಚಳ್ಳಕೆರೆ: ತಾಲೂಕಿನ ವೇದಾವತಿ ನದಿಯ ತೀರದಲ್ಲಿ ಅಕ್ರಮ ಮರಳು ಸಾಗಾಣಿಕೆ ನಡೆಯುತ್ತಿದ್ದು, ಇದರಲ್ಲಿ ಕೆಲವು ರಾಜಕೀಯ ವ್ಯಕ್ತಿಗಳು ಸಹ ಇರುವ ಬಗ್ಗೆ ಗ್ರಾಮಸ್ಥರಿಂದ ದೂರುಗಳು ಬಂದಿದ್ದು, ಈ ಬಗ್ಗೆ ಈಗಾಗಲೇ ಹಲವಾರು ಬಾರಿ ವರದಿ ನೀಡಲಾಗಿದೆ.
ವರದಿಗೆ ಪುಷ್ಟಿ ನೀಡುವಂತೆ ಬುಧವಾರ ಬೆಳಗ್ಗೆ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಲಾರಿಯೊಂದನ್ನು ತಡೆದು ತಪಾಸಣೆ ಮಾಡಿದಾಗ ಈ ಮರಳು ಸಾಗಾಣಿಕೆಯಲ್ಲಿ ಹೆಚ್ಚಾಗಿ ರಾಜಕೀಯ ಪಕ್ಷಗಳ ಮುಖಂಡರೇ ಮುಂಚೂಣಿಯಲ್ಲಿದ್ದಾರೆಂದು ಸ್ಪಷ್ಟವಾಗುತ್ತದೆ.
ತಾ.ಪಂ. ಸದಸ್ಯ ಎಂ.ಎನ್. ಮಂಜುನಾಥ ಬೆಳಗ್ಗೆ 7ರ ಸಮಯದಲ್ಲಿ ಚಳ್ಳಕೆರೆ ಕಡೆ ಬರುವಾಗ ಪಾವಗಡ ರಸ್ತೆಯ ರೈಲ್ವೆ ಗೇಟ್ ಬಳಿ ಮರಳು ತುಂಬಿದ ಲಾರಿಯೊಂದು ನಿಂತಿದ್ದು, ಈ ಬಗ್ಗೆ ಕೂಡಲೇ ತಹಸೀಲ್ದಾರ್ ಡಿ.ಕೆ. ರಾಮಚಂದ್ರಪ್ಪ ಅವರನ್ನು ಸಂಪರ್ಕಿಸಿದಾಗ ಕಂದಾಯಾಧಿಕಾರಿ ಸಿ.ಎಸ್. ಭಾನುಮೂರ್ತಿ ಮತ್ತು ಗ್ರಾಮ ಲೆಕ್ಕಿಗ ರಾಜನಾಯಕರೊಂದಿಗೆ ಸ್ಥಳಕ್ಕೆ ಆಗಮಿಸಿದಾಗ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ಲಾರಿ ಪತ್ತೆಯಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.