ರೇಷ್ಮೆ ಬೆಳೆದು ಆದಾಯ ಹೆಚ್ಚಿಸಿಕೊಳ್ಳಿ
ಚಳ್ಳಕೆರೆ: ಸರ್ಕಾರ ರೈತರ ನೆರವಿಗಾಗಿ ವಿನೂತನ ಯೋಜನೆ ಜಾರಿಗೊಳಿಸಿದೆ. ಕೇವಲ ಕೃಷಿ ಚಟುವಟಿಕೆಗಳಿಂದ ಹೆಚ್ಚಿನ ಆರ್ಥಿಕ ಸಂಪನ್ಮೂಲ ಹೊಂದದಿದ್ದಲ್ಲಿ ರೈತರು ಇನ್ನಿತರ ಚಟುವಟಿಕೆ ಕಡೆ ಗಮನಹರಿಸಬೇಕಾಗುತ್ತದೆ.
ಅದರಲ್ಲಿ ಪ್ರಮುಖವಾಗಿ ರೇಷ್ಮೆಯೂ ಒಂದಾಗಿದ್ದು, ಈ ಇಲಾಖೆಯಲ್ಲಿ ಬರುವ ಸೌಲಭ್ಯಗಳನ್ನು ಫಲಾನುಭವಿಗಳು ಬಳಸಿಕೊಳ್ಳಬೇಕು ಎಂದು ರೇಷ್ಮೆ ವಿಸ್ತರಣಾಧಿಕಾರಿ ಸಿ.ಡಿ. ಉಷಾ ತಿಳಿಸಿದರು.
ಅವರು ತಮ್ಮ ಕಚೇರಿ ಕಾರ್ಯಾಲಯದಲ್ಲಿ ಪರಿಸಿಷ್ಟ ಜಾತಿ ಮತ್ತು ಪ.ಪಂಗಡದ ಫಲಾನುಭವಿಗಳಿಗೆ ರೇಷ್ಮೆ ಹುಳು ಸಾಕಾಣಿಕೆ ಸಲಕರಣೆ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ತಾಪಂ ಅಧ್ಯಕ್ಷ ಚಿದಾನಂದಪ್ಪ ಆಯ್ದ ಒಟ್ಟು 22 ಫಲಾನುಭವಿಗಳಿಗೆ ಸಲಕರಣೆ ವಿತರಿಸಿದರು.
ರೇಷ್ಮೆ ಇಲಾಖೆಯ ಅಧಿಕಾರಿಗಳಾದ ಎ.ಡಿ. ಈಶ್ವರಪ್ಪ ಮೊದಲಾದವರು ಭಾಗವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.