ಅಪರಿಚಿತ ವಾಹನ ಡಿಕ್ಕಿ: ವೃದ್ಧ ಸಾವು
ಚಳ್ಳಕೆರೆ: ಪಟ್ಟಣದ ಬೆಂಗಳೂರು ರಸ್ತೆಯ ಪೂಜಾ ಡಾಬಾ ಬಳಿ ಇಂದು ಬೆಳಗಿನ ಜಾವ ಅಪರರಿಚಿತ ವಾಹನವೊಂದು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸುಮಾರು 65 ವರ್ಷದ ವೃದ್ದನೊಬ್ಬನ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುತ್ತಾನೆ. ಮೃತನ ಬಗ್ಗೆ ಯಾವುದೇ ವಿವರಗಳು ಲಭ್ಯವಿಲ್ಲ. ಈ ಬಗ್ಗೆ ಸ್ಥಳಿಯ ಠಾಣೆಯನ್ನು ಸಂಪರ್ಕಿಸಲು ವಿನಂತಿಸಲಾಗಿದೆ.
ಯುವತಿ ಕಾಣೆ
ಚಳ್ಳಕೆರೆ: ಕಂಪ್ಯೂಟರ್ ತರಗತಿಗೆ ಹೋಗಿದ್ದ ಯುವತಿಯೊಬ್ಬಲು ಕಣ್ಮರೆಯಾದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇಲ್ಲಿನ ಗಾಂಧಿನಗರದ ಮಾರಣ್ಣ ಮತ್ತು ರುದ್ರಮ್ಮ ಎಂಬುವರ ಮಗಳಾದ ಎಂ.ಸುಮಾ (19) ಫೆ.1 ರಂದು ಬೆಳಗ್ಗೆ 10.00 ಗಂಟೆ ಸಮಯದಲ್ಲಿ ಕಂಪ್ಯೂಟರ್ ಶಾಲೆಗೆ ಹೋಗಿ ಬರುವುದಾಗಿ ತಿಳಿಸಿ ಮನೆಯಿಂದ ಹೊರಗೆ ಹೋಗಿದ್ದು, ಮರಳಿ ಬಂದಿರುವುದಿಲ್ಲ. ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಚಾಲಕರ ಆಯ್ಕೆ
ಹೊಳಲ್ಕೆರೆ: ಬಿಎಸ್‌ಆರ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಿ. ಶ್ರೀರಾಮುಲು ನಿರ್ದೇಶನದ ಮೇರೆಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಸಿ.ಎಸ್.ದ್ವಾರಕಾನಾಥ್ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ ಸಂಚಾಲಕರಾಗಿ ಎ.ಸಿ. ಗಂಗಾಧರಪ್ಪರನ್ನು ಆಯ್ಕೆ ಮಾಡಲಾಗಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.