ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿತ್ರದುರ್ಗ

ತಾಲೂಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ

Parashurama
Updated On : 9 Feb 2013, 10:42 am

ಹಿರಿಯೂರು: ಫೆ.16 ಮತ್ತು 17ರಂದು ನಡೆಯಲಿರುವ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಸಾಹಿತಿ, ಗಮಕಿ, ನಿವೃತ್ತ ಶಿಕ್ಷಕ ಮಾರೇನಹಳ್ಳಿ ಭೀಮಯ್ಯನವರನ್ನು ಅವರ ಹಿರಿಯೂರಿನ  ಸ್ವಗೃಹದಲ್ಲಿ ಭೇಟಿ ಮಾಡಿದ ಕಸಾಪ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಮ್ಮೇಳನಾಧ್ಯಕ್ಷರಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅಧಿಕೃತವಾಗಿ ಆಹ್ವಾನ ನೀಡಿದರು. ಈ ಸಂಧರ್ಭ ಸಾಂಪ್ರದಾಯಿಕ ಶಿಷ್ಟಾಚಾರದಂತೆ ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತು.
ಹರ್ಷ ವ್ಯಕ್ತ ಪಡಿಸಿದ ಮಾರಯ್ಯ, ಸಮ್ಮೇಳನಕ್ಕೆ ಅಧ್ಯಕ್ಷನನ್ನಾಗಿ ಆಯ್ಕೆಗೊಳಿಸಲು ತೀರ್ಮಾನಿಸಿದ ಎಲ್ಲ ಸಂವೇದನಾಶೀಲ ಮನಸ್ಸುಗಳಿಗೂ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಕಸಾಪ ಅಧ್ಯಕ್ಷ ಧನಂಜಯ್ ಕುಮಾರ್ ಮಾಧ್ಯಮಗಳೊಂದಿಗೆ ಮಾತನಾಡಿ, ನೆಹರೂ ಮೈದಾನದಲ್ಲಿ ಈ ಸಮ್ಮೇಳನದ ಎರಡು ದಿನಗಳ ಕಾರ್ಯಕ್ರಮ ಆಯೋಜಿಸಿರುವುದರಿಂದ ಈ ಜಾಗದಲ್ಲಿ ಪುಸ್ತಕ ಮಾರಾಟ ಮಳಿಗೆಯನ್ನು ತೆರೆಯ ಬಯಸುವವರು ಕಸಾಪ ಕಚೇರಿ ಸಂಪರ್ಕಿಸಬೇಕೆಂದು ತಿಳಿಸಿದರು.  ಅಶ್ಫಕ್ ಅಹ್ಮದ್, ಚಿತ್ತಯ್ಯ, ಚಂದ್ರಯ್ಯ, ಮಹಾಲಿಂಗಯ್ಯ, ನಂದವರಿಕ್, ಮಹಾದೇವ್, ಗಂಗಾಧರ್, ಬಿ.ಎನ್. ಪ್ರಕಾಶ್, ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments