ಗಲ್ಲು: ಸ್ವಾಗತ
ಹಿರಿಯೂರು: ಸಂಸತ್ ಮೇಲಿನ ದಾಳಿ ಪ್ರಕರಣದ ರೂವಾರಿ ಉಗ್ರ ಅಫ್ಜಲ್ ಗುರುವನ್ನು ಗಲ್ಲಿ ಗೇರಿಸಿದ ಕ್ರಮವನ್ನು ತಾಲೂಕಿನ ವಿವಿಧ ಸಂಘಟನೆಗಳು ಸ್ವಾಗತಿಸಿ ಹರ್ಷ ವ್ಯಕ್ತಪಡಿಸಿವೆ.
ವಂದೇ ಮಾತರಂ ಜಾಗೃತಿ ವೇದಿಕೆಯ ಅಧ್ಯಕ್ಷ ಎಂ.ಎಲ್. ಗಿರಿಧರ್ ಕನ್ನಡಪ್ರಭ ಜೊತೆ ಮಾತನಾಡಿ, ದೇಶದ್ರೋಹಿ ಕೃತ್ಯಗಳನ್ನು ಎಸಗುವವರಿಗೆ ಅಂತಿಮವಾಗಿ ಯಾವ ಶಿಕ್ಷೆ ವಿಧಿಸಲಾಗುತ್ತದೆಯೆಂಬುದಕ್ಕೆ ಕಸಬಬ್ ಮತ್ತು ಅಫ್ಜಲ್ ಗುರುವಿನ ಪ್ರಕರಣದಿಂದ ಸಾಬೀತಾಗಿದೆಯೆಂದು ತಿಳಿಸಿದ್ದಾರೆ. ಕಸಬಬ್‌ಗಿಂತ ಮುಂಚಿತವಾಗಿಯೇ ಅಫ್ಜಲ್ ಗುರುವನ್ನು ನೇಣಿಗೇರಿಸಬೇಕಾಗಿತ್ತು. ಆದರೂ ತಡವಾಗಿ ಎಚ್ಚೆತ್ತು ಕೊಂಡ ಕೇಂದ್ರ ಸರ್ಕಾರ ತನ್ನ ಹೊಣೆಗಾರಿಕೆಯನ್ನು ಪ್ರದರ್ಶಿಸಿದೆಯೆಂದರು.
ಬಿಜೆಪಿ ಹಿರಿಯ ಮುಖಂಡ ವೈ.ಎಸ್. ಅಶ್ವತ್ಥ್ ಕುಮಾರ್ ಮತ್ತು ಯುವ ಮುಖಂಡ ಕೇಶವಮೂರ್ತಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ ವಿಳಂಬವಾದರೂ ಇದು ಸ್ವಾಗತಾರ್ಹ ಕ್ರಮವಾಗಿದೆಯೆಂದು ಹೇಳಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.