'ಗುಣಮಟ್ಟದ ಆಹಾರ ಆರೋಗ್ಯಕ್ಕೆ ಸಹಕಾರಿ'
ಚಳ್ಳಕೆರೆ: ಮಾನವನಿಗೆ ಬದುಕಲು ಆಹಾರ ಬೇಕು. ಆಹಾರ ಮತ್ತು ನೀರು ಮಾನವನ ಆರೋಗ್ಯ ಕಾಪಾಡುವುದು. ಪ್ರತಿಯೊಬ್ಬರು ಪ್ರತಿನಿತ್ಯ ಆಹಾರ ಸೇವಿಸಲೇಬೇಕಾಗುತ್ತದೆ. ಆಹಾರ ನಮಗೆ ಅಮೂಲ್ಯ ವಸ್ತುವಾಗಿದೆ. ಆದರೆ ಗುಣಮಟ್ಟದ ಆಹಾರವನ್ನು ಮಾತ್ರ ನಾವು ಸೇವಿಸಬೇಕಾಗುತ್ತದೆ. ನಾವು ಪ್ರತಿನಿತ್ಯ ತೆಗೆದುಕೊಳ್ಳುವ ಆಹಾರ ಪದಾರ್ಥಗಳ ಗುಣಮಟ್ಟವನ್ನು ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ ಅನ್ವಯ ನೀಡಲಾಗುವುದು. ಈ ನಿಟ್ಟಿನಲ್ಲಿ ಈ ಕಾಯಿದೆ ತುಂಬಾ ಮಹತ್ವ ಪಡೆದಿದೆ ಎಂದು ಚಿತ್ರದುರ್ಗದ ಎಸ್ಜೆಎಂ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ.ಎಂ.ಕೆ. ಪ್ರಭುದೇವ್ ತಿಳಿಸಿದರು.
ಬಾಪೂಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ವಿ. ಚಂದ್ರಶೇಖರ್ ಮಾತನಾಡಿ, ಆಹಾರದ ಗುಣಮಟ್ಟ ತಿಳಿದು ಉಪಯೋಗಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದರು. ಪ್ರಾಂಶುಪಾಲ ಡಿ. ಕರಿಯಣ್ಣ, ಉಪನ್ಯಾಸಕ ರಾಜಣ್ಣ, ಸತೀಶ್ಚಂದ್ರ ಪಾಲ್ಗೊಂಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.