ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿತ್ರದುರ್ಗ

ಚಿಕಿತ್ಸಾ ಸಹಾಯಕ್ಕೆ ಮನವಿ

Parashurama
Updated On : 10 Feb 2013, 10:34 am

ಹಿರಿಯೂರು: ತಾಲೂಕಿನ ಕಸ್ತೂರ ರಂಗಪ್ಪನಹಳ್ಳಿ ಪ್ರಾಥಮಿಕ ಶಾಲೆಯ ಮೂರನೇ ತರಗತಿಯ ಕೆ.ಎಲ್. ಪವಿತ್ರ ಎಂಬ ವಿದ್ಯಾರ್ಥಿನಿ ಶೇ. 75 ಅಂಗವಿಕಲತೆಯಿಂದ ಬಳಲುತ್ತಿದ್ದು, ವಿಶೇಷ ಮಕ್ಕಳ ಗಣತಿ ಕಾರ್ಯದಲ್ಲಿ ಈ ಅಂಶ ಬೆಳಕಿಗೆ ಬಂದಿರುವುದಾಗಿ ತಿಳಿಸಲಾಗಿದೆ.
ಈ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು  ಹಾಗೂ ಸ್ಥಳೀಯ ಶಾಲೆಯ ಸಿಬ್ಬಂದಿವರು ವಿಷಯವನ್ನು ಆದಿವಾಲ ಗ್ರಾಮದ ಸ್ಪಂದನ ಅಂಗವಿಕಲ ಸಂಸ್ಥಯ ಗಮನಕ್ಕೆ ತರಲಾಗಿದ್ದು, ಸಂಸ್ಥೆಯು ಈ ವಿದ್ಯಾರ್ಥಿನಿಯ ಅಂಗವೈಕಲ್ಯವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಆಗಬೇಕಾಗಿರುವ ಶಸ್ತ್ರ ಚಿಕಿತ್ಸೆಯ ವೆಚ್ಚ ಭರಿಸುವುದಾಗಿ ಒಪ್ಪಿಕೊಂಡ್ಟಿಣ.
ಸಂಸ್ಥೆಯ ನೆರವಿನೊಂದಿಗೆ  ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಶಸ್ತ್ರ ಚಿಕಿತ್ಸೆ ಕೈಗೊಳ್ಳಲಾಗುವುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆದಾಗ್ಯೂ ಶಸ್ತ್ರ ಚಿಕಿತ್ಸೆಯ ವೆಚ್ಚ ಮತ್ತು ನಂತರ ಖರ್ಚುಗಳು ಮತ್ತಷ್ಟು ದುಬಾರಿಯಾಗಬಹುದೆಂಬ ಕಾರಣಕ್ಕೆ ಸಾರ್ವಜನಿಕರಿಂದ ಆರ್ಥಿಕ ಸಹಕಾರ ಬಯಸುತ್ತಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನೆರವು ನೀಡಲಿಚ್ಛಿಸುವವರು  7353000860 ನಂಬರ್‌ಗೆ ಅಥವಾ ಆದಿವಾಲ ಗ್ರಾಮದ ಸ್ಪಂದನ ಅಂಗವಿಕಲ ಸಂಸ್ಥೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಸಂಪರ್ಕಿಸಲು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments