ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿತ್ರದುರ್ಗ

ಚಿತ್ರದುರ್ಗಕ್ಕೆ ಸಿಇಸಿ ತಂಡ ಭೇಟಿ

Parashurama
Updated On : 10 Feb 2013, 10:33 am

ಚಿತ್ರದುರ್ಗ: ಜಿಲ್ಲೆಯಲ್ಲಿ ಗಣಿಗಾರಿಕೆ ನಡೆದ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ನೇಮಿಸಿದ ಸಿಇಸಿ ತಂಡ ಶನಿವಾರ ಭೇಟಿ ನೀಡಿ ಪುನರ್ವಸತಿ ಹಾಗೂ ಪುನರ್ ನಿರ್ಮಾಣ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಿತು.
ಸಿಇಸಿ ತಂಡದ ಅಧ್ಯಕ್ಷ ಪಿ.ವಿ. ಜಯಕೃಷ್ಣನ್ ನೇತೃತ್ವದಲ್ಲಿ ಸದಸ್ಯರಾದ ಮಹೇಂದ್ರ ವ್ಯಾಸ್, ಎಂ.ಕೆ. ಮುತ್ತು, ಯು.ವಿ. ಸಿಂಗ್, ದೀಪಕ್ ಶರ್ಮ, ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿರ್ದೇಶಕ ಎಚ್.ಆರ್. ಶ್ರೀನಿವಾಸ್ ಅವರು ಮಿನರಲ್ ಎಂಟರ್‌ಪ್ರೈಸಸ್ ಲಿಮಿಟೆಡ್, ಸೆಸಾಗೋವಾ ಲಿಮಿಟೆಡ್ ಸಂಸ್ಥೆಗಳು ಕೈಗೊಂಡ ಗಣಿಗಾರಿಕೆ ಪ್ರದೇಶಗಳ ವೀಕ್ಷಣೆ ನಡೆಸಿದರು.
ಜಿಲ್ಲಾಧಿಕಾರಿ ವಿ.ಪಿ. ಇಕ್ಕೇರಿ, ಜಿಪಂ ಸಿಇಓ ನಾರಾಯಣಸ್ವಾಮಿ, ಎಸ್ಪಿ ಎಂ.ಎನ್. ನಾಗರಾಜ್, ಉಪ ವಿಭಾಗಾಧಿಕಾರಿ ಎನ್.ಎಂ. ನಾಗರಾಜ್, ಜಿಲ್ಲಾ ಅರಣ್ಯಾಧಿಕಾರಿ ಕುಮಾರಸ್ವಾಮಿ, ತಹಸೀಲ್ದಾರ್ ಕುಮಾರಸ್ವಾಮಿ, ಗಣಿ ಇಲಾಖೆ ಉಪ ನಿರ್ದೇಶಕರು, ಆರ್‌ಟಿಓ ಮತ್ತಿತರೆ ಅಧಿಕಾರಿಗಳು ಸಿಇಸಿ ತಂಡದ ಜೊತೆಯಲ್ಲಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments