ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿತ್ರದುರ್ಗ

ಮನೆ ಮನೆಗೆ ಬಿಜೆಪಿ ಕರಪತ್ರ ಹಂಚಿಕೆ

Parashurama
Updated On : 10 Feb 2013, 10:33 am

ಹಿರಿಯೂರು: ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳನ್ನು ಜನತೆಗೆ ತಿಳಿಸುವ ನಿಟ್ಟಿನಲ್ಲಿ ಮನೆ ಮನೆಗೆ ತೆರಳಿ ಕರಪತ್ರ ಹಂಚಲಾಗುತ್ತಿದೆಯೆಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದೇಶ್ ಯಾದವ್ ತಿಳಿಸಿದರು.
ಪಟ್ಟಣದ ತೇರುಮಲ್ಲೇಶ್ವರ ದೇವಸ್ಥಾನದ ಆವರಣದಲ್ಲಿ ಪಕ್ಷದ ತಾಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಬಿಜೆಪಿ ಸರ್ಕಾರದ ಸಾಧನೆಗಳು ಮತ್ತು ಕೇಂದ್ರ ಸರ್ಕಾರದ ಹಗರಣಗಳನ್ನು ಜನರಿಗೆ ತಿಳಿಹೇಳುವ ಮನೆ ಮನೆಗೆ ಬಿಜೆಪಿ ರಥಯಾತ್ರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ಜರೂರತ್ತನ್ನು ಮನಗಂಡು ಪ್ರತಿ ಮನೆಗೆ ತೆರಳಿ ಸಾಧನೆಗಳ ಕುರಿತು ಪ್ರಕಟಿಸಲಾದ ಕರಪತ್ರಗಳನ್ನು ಹಂಚುವ ಮೂಲಕ ಅಭಿವೃದ್ಧಿ ಕೆಲಸಗಳ ಬಗ್ಗೆ ವಾಸ್ತವದ ವಿವರವನ್ನು ನೀಡಲಾಗುತ್ತಿದೆಯೆಂದು ಹೇಳಿದರು.
ಪಕ್ಷದ ಹಿರಿಯ ಮುಖಂಡ ವೈ.ಎಸ್. ಅಶ್ವತ್ಥ್‌ಕುಮಾರ್ ಮಾತನಾಡಿ, ಕೇಂದ್ರ ಸರ್ಕಾರವು ಕಳೆದ ಐದು ವರ್ಷಗಳಿಂದ ಹಗರಣಗಳ ಮೇಲೊಂದು ಹಗರಣಗಳನ್ನು ಮೈಮೇಲೆ ಎಳೆದುಕೊಂಡಿದೆ. ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಡುವ ಮೂಲಕ ಯುಪಿಎ ಸರ್ಕಾರವು ತನ್ನ ಭವಿಷ್ಯವನ್ನು ತಾನೆ ಹಾಳುಮಾಡಿಕೊಂಡಿದ್ದು, ಕೇಂದ್ರದಲ್ಲಿಯೂ ಈ ಬಾರಿ ಬದಲಾವಣೆ ಗಾಳಿ ಬೀಸಿ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ ಸರ್ಕಾರ ರಚಿಸಲಿದೆಯೆಂದು ಭರವಸೆ ವ್ಯಕ್ತಪಡಿಸಿದರು.
ಪಕ್ಷದ ತಾಲೂಕು ಘಟಕದ ಅಧಕ್ಷ ಸೋಮಶೇಖರ್, ಮಾಜಿ ಶಾಸಕ ರಾಮಯ್ಯ, ರಂಗೇನಹಳ್ಳಿ ರಾಮಚಂದ್ರಪ್ಪ, ತಿಪ್ಪೇ ಸ್ವಾಮಿ, ಚಿತ್ತಯ್ಯ, ಚಂದ್ರಶೇಖರ್ ಪಟೇಲ್, ಎಚ್. ಲೋಕೇಶ್, ಕೆ.ಆರ್. ನೀಲಕಂಠಪ್ಪ, ರಾಘವೇಂದ್ರ, ಗಜೇಂದ್ರಶರ್ಮ, ಪರಮೇಶ್ವರಚಾರ್, ಪಾರ್ಥಸಾರಥಿ, ಮಂಜುನಾಥ್, ಸಿಖಂದರ್, ಸಲೀಂ ಮತ್ತಿತತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments