ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿತ್ರದುರ್ಗ

ಹಕ್ಕುಪತ್ರ ನೀಡಲು ಆಗ್ರಹ

Parashurama
Updated On : 10 Feb 2013, 10:27 am

ಹೊಳಲ್ಕೆರೆ: ರೈತರು ಕಳೆದ 40 ವರ್ಷಗಳಿಂದ ಸತತವಾಗಿ ಬಗರ್ ಹುಕುಂ ಸಾಗುವಳಿದಾರರಿಗೆ ಸಾಗುವಳಿ ಚೀಟಿ ಹಾಗೂ ಹಕ್ಕು ಪತ್ರ ತಕ್ಷಣ ನೀಡಬೇಕೆಂದು ಸರ್ಕಾರವನ್ನು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಯು. ಬಸವರಾಜ್ ಒತ್ತಾಯಿಸಿದ್ದಾರೆ.
ಕರ್ನಾಟಕ ಪ್ರಾಂತ ರೈತ ಸಂಘ, ಹೊಳಲ್ಕೆರೆ ತಾಲೂಕು ಸಂಘಟನೆ ಸಮಿತಿ, ಬಗರ್ ಹುಕುಂ ಸಾಗುವಳಿದಾರರ ಹೋರಾಟ ಸಮಿತಿ ವಾಲ್ಮೀಕಿ ಭವನದಲ್ಲಿ ಆಯೋಜಿಸಿದ್ದ ರೈತ ಸಮಾವೇಶದಲ್ಲಿ ಮಾತನಾಡಿ, ರಾಜ್ಯದಲ್ಲಿ 16 ಲಕ್ಷ ಬಗರ್ ಹುಕುಂ ಸಾಗುವಳಿದಾರರು ಇದ್ದಾರೆ. ಇವರು ಸಾಗುವಳಿ ಮಾಡುತ್ತಿರುವ ಭೂಮಿಯನ್ನು ಕಿತ್ತುಕೊಳ್ಳುವ ಪ್ರಯತ್ನಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಿರುವುದಕ್ಕೆ ಆಕ್ರೋಶ್ ವ್ಯಕ್ತಪಡಿಸಿದರು.
ರೈತರಿಗೆ ಹಕ್ಕು ಪತ್ರ ಕೂಡಲು ಕಳೆದ 2 ವರ್ಷಗಳಿಂದ ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ತೀವ್ರ ಹೋರಾಟ ನಡೆಸಿದ್ದೇವೆ. ಇದರ ಪರಿಣಾಮ ಸದಾನಂದಗೌಡ ಮುಖ್ಯ ಮಂತ್ರಿ ಇದ್ದಾಗ ಎರಡು ಬಾರಿ ಸಬೆ ನಡೆಸಿದ್ದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.
ಜಿಲ್ಲಾ ಸಂಚಾಲಕ ಡಿ.ಎಂ. ಮಲಿಯಪ್ಪ ಮಾತನಾಡಿ, ಜೋಳ ರಾಗಿ ಸೇರಿದಂತೆ ದಿನ ಬಳಕೆಯ ವಸ್ತುಗಳನ್ನು ಗಗನಕ್ಕೆ ಏರಿಸಿ ಜನಸಾಮಾನ್ಯರ ಜೀವನ ಸಂಕಷ್ಟದ ಪರಿಸ್ಥಿತಿಗೆ ತಂದಿದ್ದಾರೆ ಎಂದು ಆರೋಪಿಸಿದರು. ಮುಂದಿನ ಹೋರಾಟಕ್ಕೆ ಸಮಿತಿ ರಚಿಸಲಾಯಿತು. ತಾಲೂಕು ಸಂಚಾಲಕರಾಗಿ ಎಚ್. ಲಕ್ಷ್ಮಣ್, ಸಹ ಸಂಚಾಲಕ ಗೋವಿದರಾಜು, ಮಾರಪ್ಪ, ಸುರೇಶ್, ಮಂಜುನಾಥ್, ಕಸ್ತೂರಪ್ಪ, ರಂಗಪ್ಪ, ವೆಂಕಟೇಶ್, ಗೌಡ ಜಯ್ಯಣ್ಣರನ್ನು ಆಯ್ಕೆ ಮಾಡಲಾಯಿತು. ಎ. ಮಾರಪ್ಪ, ಎ.ಕೆ. ಚಂದ್ರಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments