ಹಿಂತಿರುಗಿದರೋಗಿಗಳು
ಹಿರಿಯೂರು: ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಮುಷ್ಕರ ಎರಡನೇ ದಿನವೂ ಮುಂದುವರೆದ ಕಾರಣಕ್ಕೆ ಸಾರ್ವಜನಿಕ ಆಸ್ಪತ್ರೆಗೆ ಬರುತ್ತಿದ್ದ ರೋಗಿಗಳ ಸ್ಥಿತಿ ಚಿಂತಾಜನಕವಾಗಿತ್ತು.
ವೈದ್ಯರು ಏಕಾಏಕಿ ಮುಷ್ಕರಕ್ಕೆ ಮುಂದಾಗಿ ಸೇವೆ ನಿಲ್ಲಿಸಿರುವುದನ್ನು ಹಳ್ಳಿಗಳಿಂದ ಬಂದಿದ್ದ ನೂರಾರು ಜನ ರೋಗಿಗಳು ಬಂದ ದಾರಿಗೆ ಸುಂಕವಿಲ್ಲದಂತೆ ವಾಪಾಸಾಗುತ್ತಿದ್ದರು. ಖಾಸಗಿ ಆಸ್ಪತ್ರೆ, ಕ್ಲಿನಿಕ್ಗಳಿಗೆ ಹಣ ತೆರುವ ಚೈತನ್ಯವಿಲ್ಲದ ಜನರು ಮುಷ್ಕರಕ್ಕೆ ಹಿಡಿಶಾಪ ಹಾಕುತ್ತಿದ್ದರು.
ಕಳೆದ ವರ್ಷ ಡೆಂಘೀ, ಟೈಫಾಯ್ಡ್, ಮಲೇರಿಯಾ ದಂತಹ ಸಾಂಕ್ರಾಮಿಕ ರೋಗಗಳಿಗೆ ದೊಡ್ಡಮಟ್ಟದಲ್ಲಿ ಹೈರಾಣಾಗಿದ್ದ ಜನರು ದುಸ್ವಪ್ನ ಮರೆಯುವ ಮುನ್ನವೇ ಬರಗಾಲ, ಸುಡು ಬೇಸಗೆಯ ಜೊತೆ ವೈದ್ಯರ ಮುಷ್ಕರದ ಬಿಸಿ ಇನ್ನಿಲ್ಲದಂತೆ ತಟ್ಟಿರುವುದು ಎರಡನೇ ದಿನಕ್ಕೆ ವೇದ್ಯವಾಗುತ್ತಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.