ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿತ್ರದುರ್ಗ

ಪಕ್ಷ ಬಿಡುವುದಿಲ್ಲ: ಬಸವರಾಜನ್

Parashurama
Updated On : 11 Feb 2013, 11:18 am

ಚಿತ್ರದುರ್ಗ: ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಬಿಟ್ಟು ಬೇರೆ ಪಕ್ಷಕ್ಕೆ ಸೇರುವುದಿಲ್ಲ ಮತ್ತು ಇದೇ ಚಿತ್ರದುರ್ಗ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಶಾಸಕ ಎಸ್.ಕೆ. ಬಸವರಾಜನ್ ಸ್ಪಷ್ಟಪಡಿಸಿದ್ದಾರೆ.
  ಇಲ್ಲಿನ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಶನಿವಾರ ರಾತ್ರಿ ಬಸವರಾಜನ್ ಹಿತೈಷಿಗಳ ಬಳಗದಿಂದ ಗ್ರಾಪಂ, ತಾಪಂ, ನಗರಸಭೆ ಹಾಗೂ ಎಪಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
 ಚಿತ್ರದುರ್ಗದ ಮುರುಘಾ ಮಠದ ಆಡಳಿತಾಧಿಕಾರಿ ಸ್ಥಾನದಿಂದ ಹೊರ ಹಾಕಿದ ಸಂದರ್ಭದಲ್ಲಿ ಚಿತ್ರದುರ್ಗ ತಾಲೂಕಿನ ಜನ ಕೈ ಹಿಡಿದು ನಡೆಸಿದ್ದಾರೆ. ಆದ್ದರಿಂದ ಇದೇ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ಈ ಹಿಂದೆ ಪಕ್ಷಾಂತರ ಮಾಡಿ ಮಂತ್ರಿಯಾಗುವ, ಹಣ ಮಾಡುವ ಅವಕಾಶ ಬಂದಿದ್ದರೂ, ಆಯ್ಕೆ ಮಾಡಿದ ಜನರಿಗೆ ಮೋಸ ಮಾಡಬಾರದು ಎಂಬ ಉದ್ದೇಶದಿಂದ ಎಲ್ಲವನ್ನೂ ತಿರಸ್ಕರಿಸಿ ಪ್ರಾಮಾಣಿಕ ರಾಜಕೀಯ ಮಾಡಿದ್ದೇನೆ. ಇಂದಿನ ರಾಜಕಾರಣದಲ್ಲಿ ಭ್ರಷ್ಟಾಚಾರ, ಅಪ್ರಾಮಾಣಿಕತೆ ತಾಂಡವವಾಡುತ್ತಿರುವ ಸಂದರ್ಭದಲ್ಲಿ ಯಾವ ಆಸೆಯನ್ನೂ  ಇಟ್ಟುಕೊಳ್ಳದೇ ಜನ ಸೇವೆ ಮಾಡುತ್ತಿದ್ದೇನೆ ಎಂದರು.
ಹೊಂದಾಣಿಕೆಯ ಕೆಲಸ: ಜನಸೇವೆಯನ್ನು ವೃತ್ತಿಯಾಗಿ ಸ್ವೀಕರಿಸಿರುವ ನನಗೆ, ಜನ ಅಧಿಕಾರ ನೀಡಿದ್ದಾರೆ. ಶಾಸಕನಾಗಿ ಆಯ್ಕೆಯಾದ ಮರುಕ್ಷಣವೇ ರಾಜಕಾರಣ ಮಾಡುವುದು ಬಿಟ್ಟು ಎಲ್ಲರೊಂದಿಗೆ ಹೊಂದಿಕೊಂಡು ಕೆಲಸ ಮಾಡಿದ್ದೇನೆ. ನನಗೆ ಮತ ಹಾಕಿಲ್ಲ, ನನ್ನ ಪಕ್ಷದಲ್ಲಿಲ್ಲ ಎಂಬ ಭೇದ ಮರೆತು ಪಕ್ಷಾತೀತ, ಾತ್ಯತೀತವಾಗಿ ಕೆಲಸ ಮಾಡಿದ್ದೇನೆ ಎಂದು ತಿಳಿಸಿದರು.
ಜನಪ್ರತಿನಿಧಿಗಳಲ್ಲಿ ಹೊಂದಾಣಿಕೆಯಿಲ್ಲದಿದ್ದರೆ, ಜನರಿಗೆ ಅನ್ಯಾಯವಾಗುತ್ತದೆ. ಆದ್ದರಿಂದ 5 ವರ್ಷ ಪೂರ್ತಿ  ರಾಜಕೀಯ ಮಾಡುವುದು ಬಿಟ್ಟು, ಸ್ವಾಭಿಮಾನ ಬಿಟ್ಟು, ಪರಸ್ಪರ ೊಹಂದಿಕೊಂಡು ಹೋಗಬೇಕಾದ ಅನಿವಾರ್ಯತೆ ಇದೆ. ಈ ಕಾರ್ಯಕ್ರಮಕ್ಕೆ ತಾಲೂಕಿನ ಹಲವು ಜನಪ್ರತಿನಿಧಿಗಳು ಬರಬೇಕಿತ್ತು. ಒತ್ತಡಕ್ಕೆ ಮಣಿದು ಭಾಗವಹಿಸಿಲ್ಲ. ಆದರೆ, ಇಲ್ಲಿ ಬರದೇ ಇದ್ದರೂ ಕೂಡಾ ಮಾನಸಿಕವಾಗಿ ನನ್ನೊಂದಿಗಿದ್ದಾರೆ ಎಂದರು.
ಸ್ಪಷ್ಟೀಕರಣ: ನನ್ನ ಪತ್ನಿ ಸೌಭಾಗ್ಯ ಬಸವರಾಜನ್ ಹೊಸದುರ್ಗ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಆಗಾಗ ಕೇಳಿ ಬರುತ್ತವೆ. ನಾನು ಪಕ್ಷ ಬದಲಾಯಿಸುತ್ತೇನೆ, ಬೇರೆ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲುತ್ತೇನೆ ಎಂಬ ಗಾಳಿ ಸುದ್ದಿಗಳೂ ಕೂಡಾ ಆಗಾಗ ಕೇಳಿ ಬರುತ್ತಿವೆ. ಆದರೆ, ಈ ಎಲ್ಲ ಸುದ್ದಿಗಳು ಸುಳ್ಳು. ನನ್ನ ಪತ್ನಿ ಸೌಭಾಗ್ಯ ಹೊಸದುರ್ಗದಲ್ಲಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನಾನು ಚಿತ್ರದುರ್ಗ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಬಸವರಾಜನ್ ಸ್ಪಷ್ಟಪಡಿಸಿದರು.
 ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅಭಿಪ್ರಾಯ ವ್ಯಕ್ತಪಡಿಸಿದ ನಗರಸಭೆ ಸದಸ್ಯೆ ರುದ್ರಾಣಿ ಗಂಗಾಧರ್, ಪಕ್ಷಭೇದ ಮರೆತು ಅಭಿನಂದನೆ ಸ್ವೀಕರಿಸಿದ್ದು, ಅಧಿಕಾರಾವಧಿ ಮುಗಿಯುವ ಸಂದರ್ಭದಲ್ಲಿ ಇಂತಹ ಕಾರ್ಯಕ್ರಮ ಮಾಡುವುದರಲ್ಲಿ ಯಾವ ತಪ್ಪೂ ಇಲ್ಲ ಎಂದರು.
  ನಗರಸಭೆ, ಗ್ರಾಪಂ, ತಾಪಂ, ಎಪಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments