ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿತ್ರದುರ್ಗ

ವಸತಿ ಶಾಲೆಯಲ್ಲಿ 5,000 ಮಕ್ಕಳಿಗೆ ಪ್ರವೇಶ

Parashurama
Updated On : 11 Feb 2013, 11:00 am

ಹಿರಿಯೂರು: ತಾಲೂಕಿನ ದೇವರಕೊಟ್ಟ ಗ್ರಾಮದಲ್ಲಿ ನೂರು ಎಕರೆ ಪ್ರದೇಶದಲ್ಲಿ ನಿರ್ಮಿಸಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 1200 ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ 5,000 ಮಕ್ಕಳಿಗೆ ಪ್ರವೇಶಾತಿ ನೀಡುವ ಗುರಿ ಹೊಂದಲಾಗಿದೆಯೆಂದು ಶಾಸಕ ಡಿ. ಸುಧಾಕರ್ ತಿಳಿಸಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಕಳೆದ ನಾಲ್ಕುವರೆ ವರ್ಷಗಳಲ್ಲಿ ಶಿಕ್ಷರ ರಂಗದ ಅಭಿವೃದ್ಧಿಗಾಗಿಯೇ ನೂರು ಕೋಟಿಗೂ ಹೆಚ್ಚಿನ ಅನುದಾನ ತರಲಾಗಿದೆಯೆಂದು ಹೇಳಿದರು. ಮೊರಾರ್ಜಿ ದೇಸಾಯಿ ವಸತಿ ಶಾಲಾ ಸಮುಚ್ಚಯದ ಬಳಿ ಮತ್ತೆ ನಾಲ್ಕು ಭೋಧನಾ ಕೊಠಡಿಗಳನ್ನು ನಿರ್ಮಿಸುವ ಉದ್ದೇಶ ಹೊಂದಲಾಗಿದೆಯೆಂದು ಹೇಳಿದರು. ವಿಶೇಷವಾಗಿ ಹೆಣ್ಣುಮಕ್ಕಳು ಈ ಎಲ್ಲಾ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಉತ್ತಮ ಭವಿಷ್ಯ ಕಟ್ಟಿಕೊಳ್ಳಬೇಕಾಗಿದೆಯೆಂದು ಹೇಳಿದರು.
ಪ್ರೊ. ರಂಗಲಕ್ಷ್ಮಮ್ಮ ಮಾತನಾಡಿ, ಹೆಣ್ಣುಮಕ್ಕಳು ಜಾತಿ ಮತ್ತು ಲಿಂಗ ಅಸಮಾನತೆ ಸಮಸ್ಯೆಗಳಿಗೆ ಸಿಕ್ಕು ನರಳುತ್ತಿದ್ದು ಅವುಗಳಿಂದ ಅವರನ್ನು ಕರೆತರುವ ಪ್ರಯತ್ನವಾಗಬೇಕೆಂದು ಹೇಳಿದರು. ಪುರಸಭಾಧ್ಯಕ್ಷೆ ಮಂಜುಳಾ, ಪ್ರಾಂಶುಪಾಲ ಚಿಕ್ಕಣ್ಣ, ರೇವಣಸಿದ್ದಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments