ವಿಚಾರವಂತಿಕೆ ಬೆಳೆಸಿಕೊಳ್ಳಿ
ಚಿತ್ರದುರ್ಗ: ವಿಚಾರವಂತಿಕೆಯನ್ನು ಭೋವಿ ಸಮಾಜದ ಸಮಸ್ತರು ಬೆಳೆಸಿಕೊಂಡಾಗ ಸಮಾಜದ ಸಂಘಟನೆ ಸಾಧ್ಯ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಹೇಳಿದರು.
ದಾವಣಗೆರೆ ರಸ್ತೆಯ ಹೊರವಲಯದಲ್ಲಿರುವ ಶಿವಯೋಗಿ ಸಿದ್ದರಾಮೇಶ್ವರರ ಭೋವಿ ಗುರುಪೀಠದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಸ್ವಾಮೀಜಿ, ಕಳೆದ 3 ರಂದು ಚಿತ್ರದುರ್ಗದಲ್ಲಿ ಸಿದ್ದರಾಮೇಶ್ವರರ ಜಯಂತಿ ಯಶಸ್ವಿಯಾಗಲು ಸಮಾಜದ ಸಮಸ್ತರು ಹಾಗೂ ಮುಖಂಡರುಗಳ ಶ್ರಮವೇ ಕಾರಣ. ಜೊತೆಗೆ ಸರ್ಕಾರದ ವತಿಯಿಂದ ಸಿದ್ದರಾಮೇಶ್ವರರ ಜಯಂತಿ ಆಚರಣೆಯಾದದ್ದು ತುಂಬಾ ಹೆಮ್ಮೆಯ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದರು.
ಮಹಾತ್ಮರ ವಿಚಾರಗಳನ್ನು ಅರ್ಥಮಾಡಿಕೊಳ್ಳಬೇಕಾದರೆ ಸಮಾಧಾನದಿಂದ ಸಕ್ರಿಯವಾಗಿ ಭಾಗವಹಿಸುವಿಕೆ ಬಹಳ ಮುಖ್ಯವಾದುದು ಎಂದು ತಿಳಿಸಿದ ಶರಣರು ವಿಚಾರವಂತಿಕೆಯಿಂದ ವ್ಯಕ್ತಿ ಪರಿಪೂರ್ಣನಾಗುತ್ತಾನೆ ಎಂದರು. ಮುಂದಿನ ದಿನಗಳಲ್ಲಿ ಸಿದ್ದರಾಮೇಶ್ವರರ ಜಯಂತಿಯನ್ನು ರಾಜ್ಯಾದ್ಯಂತ ಆಚರಿಸಲಾಗುವುದು. ಆ ಸಂದರ್ಭದಲ್ಲಿ ಭೋವಿ ಸಮಾಜದ ಮುಖಂಡರು ಹಾಗೂ ಸಮಸ್ತ ಜನತೆಯ ಸಹಕಾರದೊಂದಿಗೆ ಸಿದ್ದರಾಮೇಶ್ವರರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಭೋವಿ ಸಮಾಜದ ಅಭಿವೃದ್ಧಿ ನಿಗಮಕ್ಕೆ ಅನುದಾನ ಬಿಡುಗಡೆಗೊಳಿಸುವಲ್ಲಿ ಶಾಸಕರು ಮತ್ತು ಸಂಸದರ ಶ್ರಮ ತುಂಬಾ ಪ್ರಮುಖವಾದುದು ಸ್ಮರಿಸಿದ ಸ್ವಾಮೀಜಿ ಹಿಂದುಳಿದ ವರ್ಗಗಳ ಸ್ವಾಮೀಜಿಗಳು ಒಗ್ಗಟ್ಟಾಗಿದ್ದ ಪರಿಣಾಮವಾಗಿ ಈ ಬಾರಿ ಬಜೆಟ್‌ನಲ್ಲಿ ಹೆಚ್ಚು ಅನುದಾನ ಪಡೆಯಲು ಸಾಧ್ಯವಾಯಿತು ಎಂದರು.
ಡಿವೈಎಸ್ಪಿ ಆಂಜನೇಯ ಮಾತನಾಡಿದರು.
ಭೋವಿ ಸಂಘದ ಅಧ್ಯಕ್ಷ ಡಿ. ತಿಮ್ಮಣ್ಣ, ಸಂಸ್ಥೆ ಅಧ್ಯಕ್ಷ ಎಂ.ಬಿ. ಗುರಪ್ಪ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಈ. ಮಂಜುನಾಥ್, ಕೆ. ರುದ್ರಪ್ಪ, ಜಿಪಂ ಸದಸ್ಯ ಅನಿಲ್ ಕುಮಾರ್, ವೈ. ಸತ್ಯಪ್ಪ, ಗೋವಿಂದಪ್ಪ, ಎಚ್. ಲಕ್ಷ್ಮಣ್, ಭೋವಿ ಸಮಾಜದ ಸಮಸ್ತ ಮುಖಂಡರು ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಭೀಮರಾಜ್ ಕಾರ್ಯಕ್ರಮ ನಿರೂಪಿಸಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.