'ಶಿಕ್ಷಣದ ಜೊತೆ ಉತ್ತಮ ಸಂಸ್ಕಾರ ಅಗತ್ಯ'
ಹೊಸದುರ್ಗ: ಇಂದಿನ ಜಾಗತೀಕರಣದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಮೂಲಕ ಅವರನ್ನು ಸಂಸ್ಕಾರವಂತರನ್ನಾಗಿ ಮಾಡಬೇಕು ಎಂದು ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಸೋಮೇನಹಳ್ಳಿ ಮಲ್ಲಿಕಾರ್ಜುನ ಆರಾಧ್ಯ ಹೇಲಿದರು.
ಅವರು ತಾಲೂಕಿನ ಕಪ್ಪಗೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.
ಸಮಾಜದಲ್ಲಿ ಶಿಕ್ಷಣವಂತರೇ ದುಷ್ಕೃತ ಎಸಗುತ್ತಿದ್ದಾರೆ ಎಂಬುದು ವಿಷಾದನೀಯ. ಸಾಂಸ್ಕೃತಿಕ ಬದುಕಿನಿಂದ ಮನಸ್ಸನ್ನು ಉಲ್ಲಾಸಗೊಳಿಸಿ ಉತ್ತಮ ಜೀವನ ಸಾಗಿಸಬೇಕು ಎಂದರು.
ಜನಪದ ಕಲಾವಿದ ಪೀಲಾಪುರ ಕಂಠೇಶ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಸರ್ಕಾರದ ಸವಲತ್ತುಗಳು ಸಾಕಷ್ಟಿದ್ದು, ಪೋಷಕರ ಇಂಗ್ಲೀಷ್ ವ್ಯಾಮೋಹದಿಂದ ಮಕ್ಕಳು ನೈತಿಕ ಶಿಕ್ಷಣದಿಂದ ದೂರವಾಗುತ್ತಿದ್ದಾರೆ ಎಂದರು.
ಬಲ್ಲಾಳಸಮುದ್ರ ಗ್ರಾಪಂ ಅಧ್ಯಕ್ಷೆ ಪ್ರೇಮ ಲೀಲಾ, ಎಸ್ಡಿಎಂಸಿ ಅಧ್ಯಕ್ಷ ಪುಟ್ಟರಾಜು, ಮು.ಶಿ. ಶಿವಣ್ಣ, ಶಿಕ್ಷಕ ಹರೀಶ್, ಕವಿತಾ, ಪಾರ್ವತಮ್ಮ, ಶಿವಣ್ಣ, ಆಶ್ರಫ್ ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.