ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿತ್ರದುರ್ಗ

14ರಂದು ನವಗ್ರಹ ಪ್ರತಿಷ್ಠಾಪನೆ

Parashurama
Updated On : 12 Feb 2013, 10:49 am

ಹೊಳಲ್ಕೆರೆ: ಚಿತ್ರದುರ್ಗ ವೀರಶೈವ ಸಮಾಜದ ಅಧ್ಯಕ್ಷ  ಕೆ.ಆರ್. ಶಿವಪ್ರಕಾಶ್ ಕುಟುಂಬ, ಎನ್.ಜಿ. ಹಳ್ಳಿ ಗ್ರಾಮಸ್ಥರು ಹಾಗೂ ಶ್ರೀ ಪ್ರಸನ್ನ ಗಣಪತಿ ಅಭಿವೃದ್ಧಿ ಸಮಿತಿ ಸಹಯೋಗದಲ್ಲಿ ನವಗ್ರಹ ದೇವತಾ ಮೂರ್ತಿಗಳ ಪ್ರತಿಷ್ಠಾಪನೆ ಫೆ.14ರಂದು ಬೆಳಗ್ಗೆ 8ಕ್ಕೆ ಹಮ್ಮಿಕೊಳ್ಳಲಾಗಿದೆ.  ಪಟ್ಟಣದ ಪ್ರಸನ್ನ ಗಣಪತಿ ದೇವಸ್ಥಾನದ ಕಲ್ಯಾಣ ಮಂಟಪದ ಅವರಣದಲ್ಲಿ ನಡೆಯಲಿದ್ದು, 1ರು.ರಂದು ರಾತ್ರಿ ಧಾರ್ಮಿಕ ವಿಧಿ ವಿಧಾನಗಳಾದ ಗಣಪತಿ ಪೂಣ್ಯಾಹ, ವಾಚನ, ಸ್ವಸ್ತಿ ಸಮಾರಾಧನೆ, ನವಗ್ರಹ, ಪಂಚಕಳಸ, ಮೃತ್ಯುಂಜಯ, ಅಷ್ಟದಿಕ್ಪಾಲಕ, ಸಪ್ತಸಮಾಪದೇವತಾ ಪೂಜೆಗಳು ನೆರವೇರಲಿವೆ. ನಂತರ ನವಗ್ರಹ, ರಾಕ್ಷೋಘ್ನ, ನಾಗಹೋಮ, ವಾಸ್ತು, ಹೋಮ, ರುದ್ರಾಭಿಷೇಕ, ಬಲಿದಾನ, ಮಹಾ ಆಷ್ಟೋತ್ತರ, ವಿಶೇಷ ಪೂಜೆ ಮಹಾ ಮಂಗಳಾರತಿ ನಂತರ ಪ್ರಸಾದ ವಿನಿಯೋಗ ಮಾಡಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ಯಶಸ್ವಿಕೊಳಿಸಲು ಕೋರಿದ್ದಾರೆ.
ಪದಾಧಿಕಾರಿಗಳ ಆಯ್ಕೆ
ಹೊಳಲ್ಕೆರೆ: ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಕಾರ್ಯಧ್ಯಕ್ಷ ತಿಮ್ಮೇಶ್ ಅವರ ಆದೇಶದ ಮೇರೆಗೆ ತಾಲೂಕು ಮಲ್ಲಾಡಿಹಳ್ಳಿಯಲ್ಲಿ ಕರವೇ ಘಟಕದ ಅಧ್ಯಕ್ಷರಾಗಿ ಎಂ.ಕೆ. ಸತೀಶ, ಕಾರ್ಯಧ್ಯಕ್ಷರಾಗಿ ಉಮೇಶ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಾಲೂಕು ಕರವೇ ಅಧ್ಯಕ್ಷ ಪಿ.ಹನುಮಂತಪ್ಪ ತಿಳಿಸಿದ್ದಾರೆ.
'ಪರಿಸರದ ರಕ್ಷಣೆ ಎಲ್ಲರ ಕರ್ತವ್ಯ'
ಹೊಳಲ್ಕೆರೆ: ಕಲುಷಿತಗೊಳ್ಳುತ್ತಿರುವ ಪರಿಸರದ ಬಗ್ಗೆ ಜಾಗೃತರಾಗಿ ಪರಿಸರದ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಚಿತ್ರದುರ್ಗದ ಪ್ರೊ. ಎಚ್.ಕೆ.ಎಸ್. ಸ್ವಾಮಿ ಹೇಳಿದರು. ತಾಲೂಕು ರೆಡ್‌ಕ್ರಾಸ್ ಸಂಸ್ಥೆಯಿಂದ ಬೊಮ್ಮನಕಟ್ಟೆ ಸರ್ಕಾರಿ ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಏರ್ಪಡಿಸಿದ್ದ ಜಲಸಂರಕ್ಷಣೆ ಮತ್ತು ಪರಿಸರ ಜಾಗೃತಿ ಕಾರ್ಯಗಾರ ಉದ್ಘಾಟಿಸಿ  ಅವರು ಮಾತನಾಡಿದರು.
ರೋಗ ರುಜಿನ: ಮಣ್ಣಿನಲ್ಲಿರುವ ನೀರು, ಗೊಬ್ಬರ ಲವಣಾಂಶ, ಪ್ಲಾಸ್ಟಿಕ್‌ನಂತಹ ವಸ್ತುಗಳಿಂದ ತನ್ನ ಸಾರ ಕಳೆದುಕೊಂಡು ಭೂಮಿ ಉಪಯೋಗಕ್ಕೆ ಬಾರದಂತಾಗಿದೆ. ಪರಿಸರದಲ್ಲಿ ಇಂಗಾಲದ ಡೈಆಕ್ಸೈಡ್ ಹೆಚ್ಚಾಗಿ ಅಮ್ಲಜನಕ ಪ್ರಮಾಣ ಕಡಿಮೆಯಾಗಿದೆ. ಇದರಿಂದ ಮಾನವ ಇಂದು ಹಲವು ರೋಗ ರುಜಿನಗಳಿಗೆ ತುತ್ತಾಗುತ್ತಿದ್ದಾನೆ ಎಂದವರು ಆತಂಕ ವ್ಯಕ್ತಪಡಿಸಿದರು.
ಜಲ ಸಂರಕ್ಷಣೆ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಬಿ.ಟಿ. ಬಸವರಾಜ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.   ಉಪಾಧ್ಯಕ್ಷ ಪರಮೇಶ್ವರಪ್ಪ, ಕಾರ್ಯದರ್ಶಿ ಗಿರೀಶ್, ಮಂಜುನಾಥ್, ಅನಿತಾ ತಿಪ್ಪೇಸ್ವಾಮಿ, ಮಂಜುಳಾ, ಹರೀಶ್, ಗುರುದೇವ, ವಿಜಯಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments