ಇಂದು ತಾಪಂ ಸಾಮಾನ್ಯ ಸಭೆ
ಚಿತ್ರದುರ್ಗ: ಇಲ್ಲಿನ ತಾಪಂ ಸಾಮಾನ್ಯ ಸಭೆ ಮಂಗಳವಾರ ಬೆಳಗ್ಗೆ 11ಕ್ಕೆ ಅಧ್ಯಕ್ಷ ಮಹಲಿಂಗಪ್ಪನವರ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ರುದ್ರಮುನಿ ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯ
ಚಿತ್ರದುರ್ಗ: ನಗರದ 66/11 ಕೆವಿ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್ 2 ಜೋಗಿಮಟ್ಟಿ 11 ಕೆವಿ ಮಾರ್ಗದಲ್ಲಿ ವಿದ್ಯುತ್ ಕಂಬ ಮತ್ತು ವಾಹಕ ಬದಲಿಸುವ ಕೆಲಸವನ್ನು ಮಂಗಳವಾರ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಕೆಳಗೋಟೆ, ಮುನಿಸಿಪಲ್ ಕಾಲೋನಿ, ಏಕಲವ್ಯ ವೃತ್ತ, ಸಿ.ಕೆ. ಪುರ ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕೆ.ಪಿ. ಬಸವರಾಜ್ ತಿಳಿಸಿದ್ದಾರೆ.
ಅರ್ಜಿ ವಜಾ
ಚಿತ್ರದುರ್ಗ: ಹೊಳಲ್ಕೆರೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬಿ.ಎಂ.ಎಸ್. ವೀರಯ್ಯ ಹಾಗೂ ದ್ವಿತೀಯ ದರ್ಜೆ ಗುಮಾಸ್ತ ವೀರಯ್ಯ ಇವರು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಎಸ್. ಶ್ರೀನಿವಾಸ್ ಹರೀಶ್ ಕುಮಾರ್ ಸೋಮವಾರ ವಜಾಗೊಳಿಸಿ ತೀರ್ಪು ನೀಡಿದ್ದಾರೆ.
ಅಕ್ರಮ ದಾಸ್ತಾನು ಮಾಡಿದ್ದ ಮರಳು ವಶ
ಮೊಳಕಾಲ್ಮುರು: “ ಮರಳು: ಬರಿದಾಗುತ್ತಿದೆ ಎಂಬ ಶೀರ್ಷಿಕೆಯಡಿ ಕನ್ನಡಪ್ರಭದಲ್ಲಿ ವರದಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲಾಧಿಕಾರಿ ವಿಪಿ ಇಕ್ಕೇರಿ ಹಾನಗಲ್ ಸರ್ಕಲ್ನ ಸಣ್ಣ ನೀರಾವರಿ ಇಲಾಖೆಗೆ ಸಂಬಂಧಿಸಿದ ಸ್ಥಳದಲ್ಲಿ ಅನುಮತಿ ಇಲ್ಲದೇ ದಾಸ್ತಾನು ಮಾಡಿದ್ದ ಮರಳನ್ನು ವಶಪಡಿಸಿಕೊಂಡು ಲೋಕೋಪಯೋಗಿ ಇಲಾಖೆ ಸುಪರ್ದಿಗೆ ವಹಿಸಿ ಆದೇಶ ಮಾಡಿದ್ದಾರೆ.
ಅಲ್ಲದೇ ಮರಳು ಸಾಗಾಟದ ಸ್ಥಳಗಳಲ್ಲಿ ಹದ್ದಿನ ಕಣ್ಣಿಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿ ಮರಳು ಇರುವ ಕಡೆ ಯಾವುದೇ ವಾಹನಗಳು ಚಲಿಸದಂತೆ, ಟ್ರೆಂಚ್ ಹೊಡೆಸಬೇಕೆಂದು ಸೂಚಿಸಿದ್ದಾರೆ. ಸ್ಥಳದಲ್ಲಿ ತಹಸೀಲ್ದಾರ್ ರಾಮಚಂದ್ರಪ್ಪ ಮತ್ತು ಉಮೇಶ್, ಶ್ರೀನಿವಾಸ, ಉಮೇಶ, ನಾಗೇಶ್ ಮೊದಲಾದವರು ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.