ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಹಿರಿಯೂರು: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು, ಮತ್ತು ತಾಲೂಕಿನ ವಾಣಿವಿಲಾಸ ಜಲಾಶಯ ಅಚ್ಚುಕಟ್ಟು ಪ್ರದೇಶದ ನೀರು ನಿರ್ವಹಣಾ ಸಿಬ್ಬಂದಿ ಚೌಡಿ, ತೋಟಿಗಳ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕೆಂದು ದಂಸಸ ಶಾಸಕ ಸುಧಾಕರ್ ನಿವಾಸದ ಮುಂದೆ ಒಂದು ದಿನದ ಸಾಂಕೇತಿಕ ಮುಷ್ಕರ ನಡೆಸಿತು.
ಈ ಸಂದರ್ಭದಲ್ಲಿ ಸಂಘಟನೆ ಮುಖಂಡ ರಾಜಗಿರಿ ಮಾತನಾಡಿ, ಶಿವನಗರ ಗ್ರಾಮದಲ್ಲಿ ದಲಿತರಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣದ ಸಂಬಂಧ ವಿವಿಧ ಇಲಾಖೆಗಳು ತಮ್ಮ ಕರ್ತವ್ಯ ಸಮರ್ಪಕವಾಗಿ ನಿರ್ವಹಿಸಿಲ್ಲದ ಕಾರಣ ಈ ಹಿಂದೆ ಭರವಸೆ ನೀಡಿದ್ದ ಮೂಲ ಸೌಕರ್ಯ ಕಲ್ಪಿಸುವುದು, ಉಳುಮೆ ಮಾಡಲು ಭೂಮಿ ನೀಡುವುದು, ಸ್ವ- ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವನ್ನು ಒದಗಿಸುವ ಯಾವ ಕೆಲಸಗಳನ್ನೂ ಮಾಡಿಲ್ಲವೆಂದು ಆರೋಪಿಸಿದರು. ಮತ್ತು ಅಚ್ಚು ಕಟ್ಟು ಪ್ರದೇಶದ ನೀರು ನಿರ್ವಹಣಾ ಸಿಬ್ಬಂದಿಯ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿರುವುದಿಲ್ಲ, ಅವರಿಗೆ ನೀಡಬೇಕಾದ ಮಾಸಿಕ ಕನಿಷ್ಠ ವೇತನವನ್ನು ಸರಿಯಾಗಿ ನೀಡಲಾಗುತ್ತಿಲ್ಲವೆಂದು ಆರೋಪಿಸಿದರು. ಈ ಕಾರಣಕ್ಕೆ ಈ ಸಮಸ್ಯೆಗಳ ಸಂಬಂಧ ತುರ್ತು ಕ್ರಮಕ್ಕೆ ಮುಂದಾಗಿ ಪರಿಹಾರ ಒದಗಿಸಿಕೊಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದೆಂದು ತಿಳಿಸಿದರು.
ನಾಗರಾಜ್, ನರಸಪ್ಪ, ಭೂತಣ್ಣ ಹಾಗೂ ವಾಣಿವಿಲಾಸ ಸಾಗರ ನೀರು ನಿರ್ವಹಣಾ ಸಂಘದ ಪದಾಧಿಕಾರಿಗಳು ದರಣಿಯಲ್ಲಿ ಪಾಲ್ಗೊಂಡಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.