ಮಕ್ಕಳಿಗೆ ವೈಚಾರಿಕ ವಿಷಯಗಳನ್ನೂ ಕಲಿಸಿ
ಚಳ್ಳಕೆರೆ: ಮಕ್ಕಳಲ್ಲಿ ಹೊಸತನ ಮೂಡಿಸುವ ಜತೆಗೆ ವೈಚಾರಿಕ ವಿಷಯಗಳನ್ನು ಶಿಕ್ಷಕರು ಕಲಿಸಿದಾಗ ಯಶಸ್ವು ಸಾಧ್ಯ ಎಂದು ಡಯಟ್ ಮಲ್ಲಣ್ಣ ಅಭಿಪ್ರಾಯಪಟ್ಟರು.
ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ನಲಿ-ಕಲಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಶಿಕ್ಷಣದಲ್ಲಿ ವಿದ್ಯಾರ್ಥಿಯತೆ ಶಿಕ್ಷಕರು ನಿರಂತರ ಕಲಿಕೆ, ವೃತ್ತಿ ಬದ್ದತೆಯಿಂದ ಸಮಾಜದಲ್ಲಿ ಉತ್ತಮ ಮಟ್ಟವನ್ನು ತಲುಪಬಹುದು ಶಿಕ್ಷಕರು ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಯಾಗಿ ಮಾಡದೆ ಅವರು ಉತ್ತಮ ಸಾಧನೆ ಮಾಡುವ ಮನಸು ಮಾಡಬೇಕು ಎಂದರು.
ಶಿಕ್ಷಣ ಕ್ಷೇತ್ರದಲ್ಲಿ ಹೋಬಳಿ, ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ಸಹಕಾರ ನೀಡಿದರೆ ಶಿಕ್ಷಣ ರಂಗದಲ್ಲಿ ಒಂದು ಹೊಸ ಸಮಾಜ ನಿರ್ಮಾಣ ಮಾಡಬಹುದು ಎಂದರು.
ಬಿಇಒ ತಿಮ್ಮಣ್ಣ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಅವರಿಗೆ ಹೆಚ್ಚಿನ ಪೋತ್ಸಹ ನೀಡಿದರೆ ಗುರುತಿಸುವುದರಲ್ಲಿ ಸಂದೇಹವಿಲ್ಲ ಎಂದರು.
ಶಿಕ್ಷಣ ಸಂಯೋಜಕ ಮೂರ್ತಪ್ಪ, ಶಿಕ್ಷಕ ದುಗರಪ್ಪ, ಹನುಮಂತಪ್ಪ, ಸಣ್ಣಸೂರಮ್ಮ, ವೆಂಕಟೇಶ್, ಸುರೇಶ್, ತಿಪ್ಪೇಸ್ವಾಮಿ, ರಾಮಯ್ಯ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.