ಅಂತರ್ ಕಾಲೇಜು ಹಾಕಿ ಪಂದ್ಯಾವಳಿ: ಎಸ್ಜೆಎಂ ಪ್ರಥಮ
ಚಿತ್ರದುರ್ಗ: ದಾವಣಗೆರೆ ವಿವಿ ವತಿಯಿಂದ ದಾವಣಗೆರೆಯಲ್ಲಿ ನಡೆದ ಅಂತರ್ ಕಾಲೇಜು ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಚಿತ್ರದುರ್ಗದ ಚಂದ್ರವಳ್ಳಿಯ ಎಸ್ಜೆಎಂ ಕಾಲೇಜು ತಂಡ ಪ್ರಥಮ ಸ್ಥಾನ ಗಳಿಸಿದೆ.
ಶಂಕರಘಟ್ಟದ ಶಿವಗಂಗೋತ್ರಿಯ ಸ್ನಾತಕೋತರ ಕಾಲೇಜು ತಂಡ ಹಾಗೂ ಚಿತ್ರದುರ್ಗ ಎಸ್ಜೆಎಂ ಕಾಲೇಜು ತಂಡದೊಂದಿಗೆ ನಡೆದ ಅಂತಿಮ ಪಂದ್ಯದಲ್ಲಿ ತೀವ್ರ ಸೆಣಸಾಟದೊಂದಿಗೆ 0-3 ಗೋಲುಗಳಿಂದ ಎಸ್ಜೆಎಂ ತಂಡ ಜಯ ಸಾಧಿಸಿದೆ.
ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣಾಧಿಕಾರಿ ಮಕ್ಸೂದ್ ಅಹಮದ್, ತಂಡದ ನಾಯಕ ರುದ್ರೇಶ್ ಹಾಗೂ ಆಟಗಾರರಾದ ರಾಕೇಶ್, ತಿಪ್ಪೇಸ್ವಾಮಿ, ರುದ್ರೇಶ್, ಅಭಿಲಾಷ್ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.