ಇಂದು ಜಿಲ್ಲಾ ಮಟ್ಟದ ಮಹಿಳಾ ಸಮಾವೇಶ
ಚಿತ್ರದುರ್ಗ: ಜಿಲ್ಲಾ ಆಡಳಿತ, ಜಿಪಂ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸೌಖ್ಯ ಸಂಸ್ಥೆಯ ಸಹಯೋಗದಲ್ಲಿ ಶುಕ್ರವಾರ ಬೆಳಗ್ಗೆ 10.30 ರಿಂದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಮಹಿಳೆಯರ ಕಾಯ್ದೆಗಳ ಕುರಿತು ಕಾರ್ಯಾಗಾರ ಮತ್ತು ಶೋಷಣೆಗೊಳಗಾದ ಮಹಿಳೆಯರ ಜಿಲ್ಲಾ ಮಟ್ಟದ ಸಮಾವೇಶವನ್ನು ಆಯೋಜಿಸಲಾಗಿದೆ.
ಸಿವಿಲ್ ನ್ಯಾಯಾಧೀಶ, ಮುಖ್ಯ ನ್ಯಾಯಿಕ ದಂಡಾಧಿಕಾರಿ ಸದಾಶಿವ ಎಸ್. ಸುಲ್ತಾನಪುರಿ ಉದ್ಘಾಟಿಸುವರು. ಜಿಲ್ಲಾಧಿಕಾರಿ ವಿ.ಪಿ. ಇಕ್ಕೇರಿ ಅಧ್ಯಕ್ಷತೆ ವಹಿಸುವರು.
ಜಿಪಂ ಸಿಇಒ ಕೆ.ಎಂ. ನಾರಾಯಣಸ್ವಾಮಿ, ಜಿಲ್ಲಾ ರಕ್ಷಣಾಧಿಕಾರಿ ಎಂ.ಎನ್. ನಾಗರಾಜ್, ಕೆ.ಎಚ್.ಪಿ.ಟಿ. ಯೋಜನಾ ನಿರ್ದೇಶಕ ಡಾ. ಶ್ರೀನಾಥ್ ಮದ್ದೂರ್ ಭಾಗವಹಿಸುವರು.
ಜಿಲ್ಲಾ ಆಸ್ಪತ್ರೆ ಆವರಣದಿಂದ ಶೋಷಿತ ಮಹಿಳೆಯರ ಜಾಥಾ ಹೊರಡಲಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಆರ್. ಮಹಲಿಂಗಪ್ಪ ಉದ್ಘಾಟಿಸುವರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.