ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿತ್ರದುರ್ಗ

ಶೌಚಾಲಯ ಕೂಡ ಮುಖ್ಯ

Parashurama
Updated On : 15 Feb 2013, 11:43 am

ಹೊಳಲ್ಕೆರೆ: ಮನೆಯಲ್ಲಿ ದೇವರಮನೆ ಎಷ್ಟು ಮುಖ್ಯವೋ ಶೌಚಾಲಯ ಕೂಡ ಅಷ್ಟೇ ಮುಖ್ಯ ಎಂದು ಚಿತ್ರದುರ್ಗ ಮರುಘಾಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಅಭಿಪ್ರಾಯಪಟ್ಟರು.
ತಾಲೂಕಿನ ಗಿಲಿಕೇನಹಳ್ಳಿ ಲಕ್ಷ್ಮಿರಂಗನಾಥಸ್ವಾಮಿ ದೇವಾಲಯದ ನೂತನ ರಾಜಗೋಪುರ ಉದ್ಘಾಟನೆ, ಕಳಶಾರೋಹಣ, ಧಾರ್ಮಿಕ ಸಮಾವೇಶವನ್ನು ಸಸಿಗೆ ನೀರು ಹಾಕಿ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಪದೇಶದ ಜನರು ಶೌಚಾಲಯ ಉಪಯೋಗಿಸದೆ ಬಯಲು ಪ್ರದೇಶದಲ್ಲಿ ಮಲಮೂತ್ರ ವಿಸರ್ಜನೆ  ಮಾಡಿದರೆ ಸುಮಾರು 1 ಕೋಟಿ ವೈರಾಣು ಗಾಳಿಯಲ್ಲಿ ಸೇರಿಕೊಳ್ಳುತ್ತವೆ. ಇದು ಸಂಶೋಧನೆಯಿಂದಲೂ ದೃಢ ಪಟ್ಟಿದೆ. ಇದರಿಂದ ಸಂಕ್ರಾಮಿಕ ರೋಗಗಳಿಗೆ ಎಡೆಮಾಡಿಕೊಡುತ್ತದೆ. ಹಾಗಾಗಿ ಶೌಚಾಲಯ ಮಹತ್ವ ಅರಿತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಗ್ರಾಮ ನ್ಯೆರ್ಮಲ್ಯ ಯೋಜನೆಯಡಿಯಲ್ಲಿ ತಾವೆಲ್ಲರೂ ಶೌಚಾಲಯ ನಿರ್ಮಿಸಿಕೊಂಡು ಆರೋಗ್ಯವಂತರಾಗಿ ಎಂದು ಕಿವಿಮಾತು ಹೇಳಿದರು.
ಸಂಸದ ಜಿ.ಎಂ. ಸಿದ್ದೇಶ್ವರ್ ಮಾತನಾಡಿ, ಊರಿಗೊಂದು ದೇವಸ್ಥಾನ ಸಾಕು. ಅದರ ಜೊತೆಗೆ ಶಾಲೆಗಳನ್ನು  ನಿರ್ಮಾಣ ಮಾಡುವ ಮೂಲಕ ಮಕ್ಕಳನ್ನು ಶಿಕ್ಷಣ ನೀಡಿ ದೇಶದ ಅಬಿವೃದ್ಧಿಗೆ ಶ್ರಮಿಸಬೇಕೆಂದರು.
ಅಭಿವೃದ್ಧಿಗೆ ಸಹಕಾರ: ಮಾಜಿ ಶಾಸಕ ಎಂ. ಚಂದ್ರಪ್ಪ ಮಾತನಾಡಿ, ಅಧಿಕಾರ ಶಾಶ್ವತವಲ್ಲ, ಅಧಿಕಾರವಿದ್ದಾಗ ನಿಸ್ವಾರ್ಥ ಮನೋಭಾವನೆಯಿಂದ ಸಮಾಜದ ಸೇವೆ ಮಾಡಿದಾಗ ನಮ್ಮ ಜೀವನ ಸಾರ್ಥಕವಾಗುತ್ತದೆ. ರಾಜಗೋಪುರಕ್ಕೆ ರು. 5 ಲಕ್ಷ ದೇಣಿಗೆ ನೀಡಿದ್ದು ಮುಂದೆ ದೇವಸ್ಥಾನದ ಅಭಿವೃದ್ಧಿ ಕೆಲಸಗಳಿಗೆ  ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಮಾಜಿ ಶಾಸಕ ಪಿ. ರಮೇಶ್, ಹಾಸ್ಯ ಸಾಹಿತಿ ಸುಧಾ ಬರಗೂರು ಮಾತನಾಡಿದರು. ಅಧ್ಯಕ್ಷತೆಯನ್ನು ಗೌಡ್ರ ಈಶ್ವರಪ್ಪ ವಹಿಸಿದ್ದರು. ಮಾಜಿ ಶಾಸಕರಾದ ಎಂ.ಬಿ. ತಿಪ್ಪೇರುದ್ರಪ್ಪ, ಯು.ಎಚ್. ತಿಮ್ಮಣ್ಣ, ಜಿಪಂ ಸದಸ್ಯ ಪಿ.ಆರ್. ಶಿವಕುಮಾರ್, ಜಿಪಂ ಮಾಜಿ ಅಧ್ಯಕ್ಷ ರಾಜಶೇಖರ್, ತಾಪಂ ಅಧ್ಯಕ್ಷ ಮೋಹನ್ ನಾಗರಾಜ್, ತಾಪಂ ಸದಸ್ಯರಾದ ರವಿ ,ತಿಮ್ಮೇಶ್, ಪಪಂ ಸದಸ್ಯ ರಮೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಗಿರೀಶ್, ದೇವಿರಮ್ಮ, ಪ್ರಭಾಕರ್, ರಾಜಗೋಪುರದ ಶಿಲ್ಪಿ ಟಿ. ಸೋಮೇಶ್, ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments