ಪಿಯುಸಿ ಪರೀಕ್ಷೆ: ನಿಷೇಧಾಜ್ಞೆ ಜಾರಿ
ಚಿತ್ರದುರ್ಗ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾ.13ರಿಂದ ಪ್ರಾರಂಭವಾಗಿ ಮಾ.28ರ ವರೆಗೆ ನಡೆಯಲಿದೆ. ಜಿಲ್ಲೆಯ 28 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಅವ್ಯವಹಾರ ತಡೆಗಟ್ಟಲು ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಿ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ವಿ.ಪಿ. ಇಕ್ಕೇರಿ ಆದೇಶಿಸಿದ್ದಾರೆ. ಚಿತ್ರದುರ್ಗ ನಗರ ಮತ್ತು ತಾಲೂಕಿನ 8 ಕೇಂದ್ರಗಳು, ಚಳ್ಳಕೆರೆ ತಾಲೂಕು 6, ಹಿರಿಯೂರು 3, ಮೊಳಕಾಲ್ಮುರು 2, ಹೊಸದುರ್ಗ 5 ಹಾಗೂ ಹೊಳಲ್ಕೆರೆ ತಾಲೂಕಿನ 4 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮತ್ತು ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಸೆಂಟರ್, ಇಂಟರ್ನೆಟ್ ಕೇಂದ್ರಗಳನ್ನು ಪರೀಕ್ಷೆ ನಡೆಯುವ ದಿನದಂದು ಬೆಳಗ್ಗೆ 8 ರಿಂದ ಮಧ್ಯಾಹ್ನ 1 ರವರೆಗೆ ಮುಚ್ಚಲು ಆದೇಶಿಸಿ ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ತರದಂತೆ ತಿಳಿಸಲಾಗಿದೆ.
18ರಿಂದ ಮೈಸೂರು ಸಿಲ್ಕ್ ಸೀರೆ ಮೇಳ
ಚಿತ್ರದುರ್ಗ: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತದಿಂದ ಮಾ.18 ರಿಂದ 20ರ ವರೆಗೆ ಐ.ಎಂ.ಎ. ಸಭಾಂಗಣದಲ್ಲಿ ರೇಷ್ಮೆ ಸೀರೆಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ನಿಗಮವು ರೇಷ್ಮೆ ಉತ್ಪನ್ನಗಳ ತಯಾರಿಕೆಯಲ್ಲಿ ನೂರು ವರ್ಷಗಳನ್ನು ಪೂರೈಸಿದ್ದು, ಈ ಸಂದರ್ಭದಲ್ಲಿ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗುತ್ತಿದೆ. ಮೇಳದಲ್ಲಿ ರೇಷ್ಮೆ ಸೀರೆಗಳನ್ನು ಖರೀದಿಸುವ ಗ್ರಾಹಕರಿಗೆ ಶೇ.30 ರಿಯಾಯಿತಿ ನೀಡಲಾಗುತ್ತದೆ. ಸರ್ಕಾರಿ ನೌಕರರಿಗೆ 10 ತಿಂಗಳ ಕಂತು ಪಾವತಿಯಲ್ಲಿ ಸಾಲವಾಗಿ ಖರೀದಿಗೆ ಅವಕಾಶವಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
ಮಾಜಿ ಸೈನಿಕರ ಅವಲಂಬಿತರಿಗೆ ಎರಡು ಪಿಂಚಣಿ
ಚಿತ್ರದುರ್ಗ: ಕೇಂದ್ರ ಸರ್ಕಾರವು ಸೇನೆಯಲ್ಲಿ ಸೇವೆ ಸಲ್ಲಿಸಿ ಬಿಡುಗಡೆ ಹೊಂದಿ ನಂತರ ಕೇಂದ್ರ ಅಥವಾ ರಾಜ್ಯ ಸರ್ಕಾರದ ಸೇವೆ ಸಲ್ಲಿಸಿದ ಮಾಜಿ ಸೈನಿಕರ ವಿಧವೆಯರು ಮತ್ತು ಅವಲಂಬಿತರಿಗೆ ಸೈನ್ಯದಲ್ಲಿ ಸಲ್ಲಿಸಿದ ಸೇವೆ ಮತ್ತು ನಂತರದಲ್ಲಿ ಸಲ್ಲಿಸಿದ ಸೇವೆ ಸೇರಿದಂತೆ ಎರಡು ಇಲಾಖೆ ಪಿಂಚಣಿ ಪಡೆಯಲು 2012ರ ಸೆಪ್ಟೆಂಬರ್ 24 ರಿಂದ ಅವಕಾಶ ಕಲ್ಪಿಸಲಾಗಿದೆ. ಅರ್ಹರು ಮಾಜಿ ಸೈನಿಕರ ವಿಧವೆಯರು, ಅವಲಂಬಿತರು ಇಲಾಖೆಯಿಂದ ಸಂಬಂಧಿಸಿದ ಪತ್ರಗಳನ್ನು ಪಡೆದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಗೆ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.