ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿತ್ರದುರ್ಗ

ಶೌಚಾಲಯಕ್ಕೆ ಪರದಾಟ

Parashurama
Updated On : 8 Mar 2013, 10:23 am

ನಾಯಕನಹಟ್ಟಿ: ಸುಪ್ರಸಿದ್ದ ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿಯ ಪುಣ್ಯಕ್ಷೇತ್ರದಲ್ಲಿ ಸಾರ್ವಜನಿಕ ಶೌಚಾಲಯಗಳು ಇಲ್ಲದೇ ಇರುವುದು ನಾಚಿಕೆಯ ಸಂಗತಿಯಾಗಿದೆ.
ದಿನ ನಿತ್ಯ ಸಾವಿರಾರು ಜನರು ಬಂದು ಶ್ರೀಗುರು ತಿಪ್ಪೇರುದ್ರಸ್ವಾಮಿಯ ಪುಣ್ಯಕ್ಷೇತ್ರದಲ್ಲಿ ಶೌಚಾಲಯದ ಸ್ವಚ್ಛತಾ ವ್ಯವಸ್ಥೆಯೇ ಇಲ್ಲದಂತಿರುವುದು ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ. ಇಲ್ಲಿನ ಬಸ್ ಸ್ಯಾಂಡ್, ಹಳೆಯ ಸಾರ್ವಜನಿಕ ಅಸ್ಪತ್ರೆಯ ಹತ್ತಿರ ಹಾಗೂ ಅಂಬೇಡ್ಕರ್ ಸರ್ಕಲ್ ಹತ್ತಿರ ಶೌಚಾಲಯದ ವ್ಯವಸ್ಥೆಯೇ ಇಲ್ಲದೆ ಸಾರ್ವಜನಿಕರು ಪರದಾಡುವಂತಾಗಿದೆ.
ನಾಗರಕಟ್ಟೆ ಹತ್ತಿರ ಶೌಚಾಲಯದ ವ್ಯವಸ್ಥೆ ಇದ್ದರೂ ಸಮರ್ಪಕವಾಗಿ ನೀರಿನ ವ್ಯವಸ್ಥೆ ಇಲ್ಲದೆ ಆನೇಕ ರೋಗಗಳಿಗೆ ದಾರಿ ಮಾಡಿಕೊಡುವುದರಲ್ಲಿ ಸಂಶಯವಿಲ್ಲ ಹಾಗೂ ಪ್ರತಿ ವರ್ಷ ಜಾತ್ರೆಯ ಸಮಯದಲ್ಲಿ ತಾತ್ಕಾಲಿಕ ಶೌಚಾಲಯಗಳು ನಿರ್ಮಾಣ ಮಾಡುತ್ತಾರೆ. ಕಳೆದ ವರ್ಷದಿಂದ ಇದನ್ನು ತೆಗೆದು ಹಾಕಿದ್ದರಿಂದ ಪರದಾಡುವ ಸ್ಥಿತಿ ಉದ್ಬವವಾಗಿದೆ. ಹೆಚ್ಚಿನ ಹಾನಿಯನ್ನು ತಪ್ಪಿಸಲು ಕ್ರಮ ಕೈಗೊಂಡು ಶೌಚಾಲಯ ನಿರ್ಮಿಸಿ ಶುಚಿತ್ವ ಕಾಪಾಡಲು ಸಂಬಂಧ ಪಟ್ಟ ಇಲಾಖೆಗೆ ಟಿ. ಬಸವರಾಜು, ಟಿ. ರಮೇಶ್, ಬಿ.ಟಿ. ಏಕಾಂತಪ್ಪ, ಟಿ.ತಿಪ್ಪೇಸ್ವಾಮಿ, ನರಸಿಂಹಮೂರ್ತಿ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments