ತುರ್ತು ಸೇವೆ ಸಿಬ್ಬಂದಿ ಮಹಿಳಾ ದಿನಾಚರಣೆ
ಚಿತ್ರದುರ್ಗ: ಇಎಂಅರ್ಐ 108 ತುರ್ತು ಸೇವೆಗಳ ಸಿಬ್ಬಂದಿ ಶುಕ್ರವಾರ ಜಿಲ್ಲಾ ಆಸ್ಪತ್ರೆಯಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಿದ್ದರು.
ಜಿಲ್ಲಾ ಸರ್ಜನ್ ಡಾ.ಪಿ.ಟಿ. ವಿಜಯಕುಮಾರ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜಕ್ಕೆ ಮಹಿಳೆಯರ ಕೊಡುಗೆ ಅಪಾರವಾಗಿದೆ ಮತ್ತು ಆರೋಗ್ಯ ಕ್ಷೇತ್ರದಲ್ಲಿಯೂ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಆರೋಗ್ಯ ಸೇವೆ ನೀಡುವಲ್ಲಿಯೂ ಮಹಿಳೆಯರು ಅಪಾರ ಕೊಡುಗೆ ನೀಡಿದ್ದಾರೆ. 108 ತುರ್ತು ಸೇವೆಯಲ್ಲಿ ಜಿಲ್ಲೆಯಾದ್ಯಂತ 40 ತುರ್ತು ಸೇವಾ ಮಹಿಳಾ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ ಎಂದರು.
ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ವೈದ್ಯರು, ಇತರೆ ಆರೋಗ್ಯ ಸಿಬ್ಬಂದಿಗೆ ಶುಭ ಕೋರಿದರು. 108 ಕಾರ್ಯ ನಿರ್ವಾಹಕ ಅಧಿಕಾರಿ ಜಿ. ರಘುಪ್ರಸಾದ್, ಸಿಬ್ಬಂದಿ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.