ಮಹಿಳಾ ದೌರ್ಜನ್ಯ ತಡೆಗೆ ಜಾಗೃತಿ ಮೂಡಿಸಬೇಕು
ಭರಮಸಾಗರ: ಸರ್ಕಾರಗಳು ಮಹಿಳೆಯರ ಮೇಲಿನ ಹಿಂಸೆ ತಡೆಗಟ್ಟಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಕೆ.ಎಸ್. ನಾರಪ್ಪ ಪ್ರೌಢಶಾಲೆ ಮುಖ್ಯ ಶಿಕ್ಷಕಿ ನಿರ್ಮಲಾದೇವಿ ಹೇಳಿದ್ದಾರೆ.
ಸಮೀಪದ ಕೊಳಹಾಳು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಆವರಣದಲ್ಲಿ ಶುಕ್ರವಾರ ಶ್ರೀ ಕ್ಷೇ.ಧ.ಗ್ರಾ ಯೋಜನೆ, ಚಿತ್ರದುರ್ಗ ತಾಲೂಕು ಕೇಂದ್ರ ಹಣಕಾಸು ಸಚಿವಾಲಯ , ನಬಾರ್ಡ್ ಹಾಗೂ ಕೆನರಾಬ್ಯಾಂಕ್ ಸಹಯೋಗದೊಂದಿಗೆ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಮಹಿಳಾ ಜ್ಞಾನವಿಕಾಸ ಕೇಂದ್ರ , ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಉದ್ಘಾಟನೆ, ಕೃಷಿ ಸಲಕರಣೆ, ಪ್ರಗತಿ ನಿಧಿ ಚೆಕ್ ವಿತರಣಾ ಸಮಾರಂಭದಲ್ಲಿ ದಾಖಲಾತಿ ಹಸ್ತಾಂತರಿಸಿ ಅವರು ಮಾತನಾಡಿದರು.
ಸ್ಮಾರ್ಟ್ ಕಾರ್ಡ್ ವಿತರಿಸಿ ನಿವೃತ್ತ ಶಿಕ್ಷಕ ಮಹಾರುದ್ರಯ್ಯ ಮಾತನಾಡಿ, ಸ್ವಾತಂತ್ರ್ಯ ಪೂರ್ವದಲ್ಲಿ ದೇಶಕ್ಕಾಗಿ ಹೋರಾಡಿದ ಮಹಿಳೆಯರಾದ ಕಿತ್ತೂರು ರಾಣಿ ಚನ್ನಮ್ಮ, ಝಾನ್ಸಿರಾಣಿ ಅವರ ಕೊಡುಗೆ ಮರೆಯುವಂತಿಲ್ಲ ಎಂದರು. ತಾಪಂ ಉಪಾಧ್ಯಕ್ಷೆ ರಂಗಮ್ಮ ಓಬಣ್ಣ ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದರು. ತಾಲೂಕು ಯೋಜನಾಧಿಕಾರಿ ಬೇಬಿ ಮಾತನಾಡಿದರು. ಸಮಾರಂಭದಲ್ಲಿ ಪಲಾನುಭವಿಗಳಿಗೆ ಕೃಷಿ ಸಲಕರಣೆಯನ್ನು ಗ್ರಾಮದ ಮುಖಂಡ ಶರಣಲಪ್ಪ ಎಚ್.ಇ ವಿತರಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷ ಬಸವರಾಜಪ್ಪ ವಹಿಸಿದ್ದರು. ಮುಖ್ಯೋಪಾದ್ಯಾಯಿನಿ ರಾಜೇಶ್ವರಿ ಒಕ್ಕೂಟದ ದಾಖಲಾತಿಗಳನ್ನು ನೂತನ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು. ಒಕ್ಕೂಟಗಳ ಪದಾಧಿಕಾರಿಗಳು, ಸೇವಾ ಪ್ರತಿನಿಧಿಗಳು, ಸ್ವಸಹಾಯ ಸಂಘದ ಸದಸ್ಯರು ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.