ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿತ್ರದುರ್ಗ

ಸಾಂಸ್ಕೃತಿಕ ಕಾರ್ಯಕ್ರಮ ಸಹಕಾರಿ

Parashurama
Updated On : 9 Mar 2013, 11:22 am

ಕ.ಪ್ರ.ವಾರ್ತೆ,ಶ್ರೀರಾಂಪುರ,ಮಾ.8
 ಇಡೀ ಸಮುದಾಯವನ್ನು ಒಂದೆಡೆ ಕಲೆ ಹಾಕುವಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ ಎಂದು ಕೆಜೆಪಿ ಮುಖಂಡ ಲಿಂಗಮೂರ್ತಿ ಹೇಳಿದರು.
 ಅವರು ಇಲ್ಲಿನ ನಾಡಕಚೇರಿ ಆವರಣದಲ್ಲಿ ಏರ್ಪಡಿಸಲಾಗಿದ್ದ ವಾಸವಿ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಮಹತ್ತರ ಸಾಧನೆ: ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಇಂದು ದೇಶದಲ್ಲಿ ಮಹತ್ತರ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವುದ ಗಮನಾರ್ಹವಾಗಿದ್ದು, ಗ್ರಾಮೀಣ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಶಿಕ್ಷಣವನ್ನು ಪರಿಣಾಮಕಾರಿಯಾಗಿ ನೀಡುವ ಅಗತ್ಯವಿದೆ ಎಂದರು.
 ಇಂದು ಗ್ರಾಮೀಣ ಭಾಗದಲ್ಲಿಯೂ ಖಾಸಗಿ ಶಾಲೆಗಳು ತೆರೆಯುತ್ತಿದ್ದು, ಶಿಕ್ಷಣ ವ್ಯಾವಹಾರಿಕವಾಗದೇ ಸಾಮಾಜಿಕ ಕ್ಷೇತ್ರವಾಗಿಬೇಕಿದೆ. ಈ ನಿಟ್ಟಿನಲ್ಲಿ ಇಲ್ಲಿನ ವಾಸವಿ ಶಾಲೆಯ ಕೆಲಸ ಮಹತ್ತರವಾದದ್ದು ಎಂದರು.
  ವಾಸವಿ ಸಂಸ್ಥೆ ಅಧ್ಯಕ್ಷ ಲಕ್ಷ್ಮೀನಾರಾಯಣಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಅಧ್ಯಕ್ಷರಾದ ಚಂದ್ರಮ್ಮ, ಡೈಯಟ್ ನಿವೃತ್ತ ಉಪನ್ಯಾಸಕ ಈರಣ್ಣ, ಹೊಸದುರ್ಗ ಪುರಸಭೆ ಅಧ್ಯಕ್ಷ ಜಬೀವುಲ್ಲಾ, ರೇಣುಕಾರಾಧ್ಯ, ಮಂಜುನಾಥ ಶೆಟ್ಟಿ, ಆರ್. ದಾಸಪ್ಪ ಮೊದಲಾದವರು ವೇದಿಕೆಯಲ್ಲಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments