ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿತ್ರದುರ್ಗ

ಕ್ರೀಡೆಯಿಂದ ಉತ್ತಮ ಆರೋಗ್ಯ

Parashurama
Updated On : 10 Mar 2013, 11:48 am

ಕ.ಪ್ರ.ವಾರ್ತೆ ಚಿತ್ರದುರ್ಗ  ಮಾ.9
ಕ್ರೀಡೆಗಳಲ್ಲಿ ಭಾಗವಹಿಸುವುದರ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿ ಶೇಷ್ಠ ಗೌರವ ಪಡೆಯಬೇಕೆಂದು ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರು ತಿಳಿಸಿದರು.
ಮಹಿಳಾ ಕ್ರೀಡಾಕೂಟ: ಎಸ್‌ಜೆಎಂ ವಿದ್ಯಾಪೀಠ ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯ, ಎಸ್‌ಜೆಎಂ ಮಹಿಳಾ ಕಾಲೇಜು ಹಾಗೂ ಎಸ್‌ಜೆಎಂ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜುಗಳ ಆಶ್ರಯದಲ್ಲಿ ನಗರದ ಜೆಎಂಐಟಿ ಕ್ರೀಡಾಂಗಣದಲ್ಲಿ  ಹಮ್ಮಿಕೊಂಡಿದ್ದ ದಾವಣಗೆರೆ ವಿಶ್ವವಿದ್ಯಾನಿಲಯದ ದ್ವಿತೀಯ ಅಂತರ ಮಹಿಳಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ದೇಶದ ಅಭಿವೃದ್ಧಿಗೆ ಕ್ರೀಡಾಕೂಟಗಳು ಹೆಚ್ಚು ಸಹಾಯಕವಾಗುತ್ತವೆ. ಕ್ರೀಡೆಗಳಲ್ಲಿ ತೊಡಗಿಸಿಕೊಂಡಾಗ ಮನಸ್ಸು ಮತ್ತು ದೇಹ ಉಲ್ಲಸಿತಗೊಂಡು ದುಶ್ಚಟಗಳಿಂದ ನಮ್ಮನ್ನು ದೂರ ಇಡುವಲ್ಲಿ ಸಹಕಾರಿಯಾಗುತ್ತದೆ ಎಂದರು.
ಅವಕಾಶ ಕಲಿಸಿ: ಕ್ರೀಡಾಕೂಟದಲ್ಲಿ ಭಾಗವಹಿಸಿದರೆ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಕ್ರೀಡಾಪಟುಗಳು ಒಂದು ರೀತಿ ರೈತರ ಹಾಗೆ. ಅವರಂತೆ ಕ್ರೀಡಾಪಟುಗಳೂ ಬಿಸಿಲಿಗೆ ತಮ್ಮನ್ನು ತಾವು ಒಡ್ಡಿಕೊಂಡೇ ಸಾಹಸ ಮಾಡಬೇಕಾಗುತ್ತದೆ. ಸೋಲು ಗೆಲುವು ಮುಖ್ಯ ಉದ್ದೇಶವಾಗದೆ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು.
ಬಿಸಿಲು ಅಂದರೆ ಬೆಳಕು, ಸಂತೋಷ ಇರುವುದರಿಂದ ಅದರ ಅನುಭವ ಎಲ್ಲರಿಗೂ ಆಗಬೇಕು. ಪ್ರತಿಭೆ ಎಲ್ಲಿಂದಲೋ ಬರುವುದಿಲ್ಲ, ಎಲ್ಲರೊಳಗೂ ಇರುವಂಥದ್ದು. ಅದನ್ನು ಸೂಕ್ತವಾಗಿ ಬಳಸಿಕೊಳ್ಳುವ ಮೂಲಕ ಅವಕಾಶ ಕಲ್ಪಿಸಿಕೊಳ್ಳಬೇಕು, ಪ್ರತಿಭೆ ತಮ್ಮದಾಗಲಿ ಎಂದು ಕ್ರೀಡಾಪಟುಗಳಿಗೆ ಅವರು ಶುಭ ಕೋರಿದರು.
ಚಂದ್ರವಳ್ಳಿಯ ಎಸ್‌ಜೆಎಂ ಕಾಲೇಜು ಪ್ರಾಚಾರ್ಯ  ಪ್ರೊ.ಎಂ.ಜಿ. ಶಶಿಧರ್ ಹಾಗೂ ಎಸ್‌ಜೆಎಂ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಡಾ.ಪಿ. ಶಿವಲಿಂಗಪ್ಪ ಮತ್ತು  ದಾವಣಗೆರೆ ವಿವಿ ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ.ಎಂಎಸ್. ರಾಜ್‌ಕುಮಾರ್, ಎಸ್‌ಜೆಎಂ ಮಹಿಳಾ ಕಾಲೇಜಿನ ಪ್ರಾಚಾರ್ಯ ಪ್ರೊ.ಎಂ. ರಂಗಸ್ವಾಮಿ, ಜೆಎಂಐಟಿ ಪ್ರಾಚಾರ್ಯ ಡಾ. ಶಿವಕುಮಾರ್, ನಂಜನಾಯಕ್, ವಿದ್ಯಾಪೀಠದ ಬೋಧಕ ಬೋಧಕೇತರ ಸಿಬ್ಬಂದಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments