ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಿ
ಮೊಳಕಾಲ್ಮುರು: ಸಾಮಾಜಿಕ ಸೇವಾ ಚಿಂತನೆಗಳನ್ನು ಮೈಗೂಡಿಸಿಕೊಂಡು ಸಮಾಜ ಮುಖಿಯಾದ ಕಾರ್ಯ ನಿರ್ವಹಿಸಬೇಕೆಂದು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ. ಪ್ರಸಾದ್ ಸಮಾಜ ಕಾರ್ಯ ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.
ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಾಜ ಕಾರ್ಯ ವಿಭಾಗದಿಂದ ಆಯೋಜಿಸಿದ್ದ ಸಮಾಜ ಕಾರ್ಯ ಸಾಮಾಜಿಕ ಅಭಿವೃದ್ಧಿಯ ಬಗ್ಗೆ ವಿಶೇಷ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
ಸಮಾಜ ಕಾರ್ಯ ವ್ಯಕ್ತಿಗಳು ಸಮಾಜದ ಒಳಿತನ್ನು ಬಯಸಿ ಕ್ರಿಯಾಶೀಲತೆಯನ್ನು ಮೈಗೂಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣ ಮಾಡುವ ಪೂರ್ಣ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು. ಕಲುಷಿತವಾದ ಸಮಾಜದಲ್ಲಿ ನೀವು ಇಚ್ಚಾಶಕ್ತಿಯಿಂದ ಉತ್ತಮ ಸ್ಥಿತಿಯತ್ತ ಕೊಂಡೊಯ್ಯುವ ಕಾರ್ಯ ಕ್ಷಮತೆಯನ್ನು ರೂಡಿಸಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.
ಪ್ರೊ. ಪ್ರಜ್ಞಾ ಮಾತನಾಡಿ, ಸಮಾಜದ ಆಯಾಮಗಳನ್ನು ತಿಳಿದುಕೊಂಡು ಸಮಾಜದಲ್ಲಿರುವ ಲೋಪದೋಷಗಳ ಕಡೆ ಅವಲೋಕನ ಮಾಡಬೇಕು. ವಿದ್ಯಾರ್ಥಿಗಳು ನವ ಸಮಾಜದ ನಿರ್ಮಾಣದ ಕಡೆ ಚಿಂತಿಸಿದರೆ ಉತ್ತಮ ಕಾರ್ಯಕರ್ತರಾಗಲು ಸಾಧ್ಯವಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರೊ.ಕೆ.ಟಿ. ಮಹಾಂತೇಶ್, ಲೀಲಾವತಿ, ಹರೀಶ್, ಉಪನ್ಯಾಸಕ ಗುರುಮೂರ್ತಿ, ಪ್ರಹ್ಲಾದ್, ಶಿವರಾಜ್ ಕಮ್ಮಾರ್ ಭಾಗವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.