ಜಿಲ್ಲೆಯಾದ್ಯಂತ ವ್ಯಾಪಕ ದಿಢೀರ್ ಮಳೆ
ಚಿತ್ರದುರ್ಗ: ನಗರ ಸ್ಥಳೀಯ ಸಂಸ್ಥೆಗಳ ಮತ ಎಣಿಕೆ ಕಾರ್ಯ ಪೂರ್ಣಗೊಂಡ ನಂತರ ಇಡೀ ಜಿಲ್ಲೆಯ ಮೇಲೆ ಆವರಿಸಿದ ಕಾರ್ಮೋಡಗಳು ಸಂಜೆ ವೇಳೆಗೆ ಬಿರುಗಾಳಿಯಿಂದ ಕೂಡಿದ ಬಿರುಮಳೆ ಸುರಿಸಿದವು.
ಇದುವರೆಗೆ ಬಿರು ಬಿಸಿಲಿನಲ್ಲಿ ಪ್ರಚಾರ ಕಾರ್ಯ ಕೈಗೊಂಡು ಬೇಸತ್ತು ರೋಸಿ ಹೋಗಿದ್ದ ಅಭ್ಯರ್ಥಿಗಳಿಗೆ ತಂಪೆರೆಯುವಂತೆ ಮಳೆ ಸುರಿಯಿತು.
ಚಿತ್ರದುರ್ಗದಲ್ಲಿ ಸುಮಾರು ಒಂದು ಗಂಟೆ ಕಾಲ ಎಡೆಬಿಡದೆ ಸುರಿದ ಮಳೆ ಹಾಗೂ ಗಾಳಿಯಿಂದಾಗಿ ತೆಂಗಿನ ಗರಿಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದು ರಾತ್ರಿ 9.30ರವರೆಗೂ ವಿದ್ಯುತ್ ಅಡಚಣೆ ಉಂಟಾಯಿತು. ಇದೇ ರೀತಿ ಹಿರಿಯೂರು, ಚಳ್ಳಕೆರೆ, ಹೊಳಲ್ಕೆರೆ ಮತ್ತಿತರೆ ಪ್ರದೇಶಗಳಲ್ಲಿಯೂ ಭಾರೀ ಮಳೆ ಸುರಿದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.