ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿತ್ರದುರ್ಗ

ತೇರು ಮಲ್ಲೇಶ್ವರ ಜಾತ್ರೆಗೆ ಅಧಿಕೃತ ತೆರೆ

Parashurama
Updated On : 12 Mar 2013, 10:20 am

ಕ.ಪ್ರ.ವಾರ್ತೆ, ಹಿರಿಯೂರು.ಮಾ11
ಜಾತ್ರೆಗಳು ನಾಡಿನ ಸಂಸ್ಕೃತಿ ಉತ್ಸವಗಳಾಗಿದ್ದು, ಕಳೆದ ಒಂದು ತಿಂಗಳಿನಿಂದಲೂ ಪಟ್ಟಣದಲ್ಲಿ ನಡೆದ ತೇರು ಮಲ್ಲೇಶ್ವರ ಜಾತ್ರಾ ಕಾರ್ಯಕ್ರಮಗಳಿಗೆ ಪಟ್ಟಣದ ಜನರು ಅತ್ಯುತ್ತಮ ಸಹಕಾರ ನೀಡಿದ್ದಾರೆ ಎಂದು ತಹಸೀಲ್ದಾರ್ ಮಲ್ಲಿಕಾರ್ಜನ್ ಹೇಳಿದರು.
  ಪಟ್ಟಣದ ತೇರುಮಲ್ಲೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿದ್ದ ಮಕ್ಕಳಿಗೆ ಬಹುಮಾನ ವಿತರಿಸುವ ಸಲುವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಜನರ ಸಂಸ್ಕೃತಿ, ಒಡನಾಟ ಬಿಂಬಿಸುವ ನಿಟ್ಟಿನಲ್ಲಿ ಪೂರ್ವಜರು ರೂಪಿಸಿರುವ ಜಾತ್ರಗಳು ಅರ್ಥಪೂರ್ಣವೆಂದು ಹೇಳಿದರು.
ಅಭಿನಂದನೆ: ಕಳೆದ ಒಂದು ತಿಂಗಳಿನಿಂದ ಪಟ್ಟಣದ ಎಲ್ಲ ಪುರಸಭಾ ಜನಪ್ರತಿನಿಧಿ ಮತ್ತು ಶಾಸಕರು ಚುನಾವಣಾ ನೀತಿ ಸಂಹಿತೆಯಿದ್ದಾಗಲೂ ಅತ್ಯಂತ ಜವಾಬ್ದಾರಿಯಿಂದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಹಕರಿಸಿದ್ದರಿಂದ ಜಾತ್ರಾ ಸಮಿತಿಯ ಪರವಾಗಿ ಎಲ್ಲರಿಗೂ ಅಭಿನಂದನೆ ತಿಳಿಸುತ್ತಿರುವುದಾಗಿ ಹೇಳಿದರು.
 ಬಹುಮಾನ ವಿತರಿಸಿ ವಂದೇ ಮಾತರಂ ಜಾಗೃತಿ ವೇದಿಕೆ ಅಧ್ಯಕ್ಷ ಸಿ. ಮಹೇಶ್ ಮಾತನಾಡಿ, ಪ್ರತಿ ಬಾರಿಯೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಮಕ್ಕಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಂದೇ ಮಾತರಂ ಸಂಘಟನೆಯ ಪರವಾಗಿ ಬಹುಮಾನ ನೀಡಲಾಗುತ್ತಿದ್ದು, ಪ್ರತಿ ವರ್ಷ ಈ ಪರಂಪರೆಯನ್ನು ಮುಂದುವರೆಸುವ ಇರಾದೆಯಿದೆ ಎಂದರು.
ಆತ್ಮವಿಶ್ವಾಸ ಹೆಚ್ಚಲಿ: ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆ ಪ್ರದರ್ಶಿಸುವುದರ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವುದರಿಂದ ಇಂತಹ ಸ್ಪರ್ಧೆಗಳು ಮಕ್ಕಳ ಆರೋಗ್ಯಕರ ಬೆಳವಣಿಗೆಯ ದೃಷ್ಟಿಯಿಂದ ಅರ್ಥಪೂರ್ಣವಾಗಿವೆ ಎಂದು ಹೇಳಿದರು.    ಜಾತ್ರಾ ಸಮಿತಿ ಅಧ್ಯಕ್ಷ ಬಬ್ಬೂರು ಜಯಣ್ಣ, ವಂದೇ ಮಾತರಂ ತಾಲೂಕು ಅಧ್ಯಕ್ಷ ಎಂ.ಎಲ್. ಗಿರಿಧರ್, ತಾಪಂ ಸದಸ್ಯ ಫಕೃದ್ದೀನ್, ಎಂ.ಡಿ. ಗೌಡ್ರು, ಕೆ.ಟಿ. ಶ್ರೀನಿವಾಸ್. ಮೂರ್ತಪ್ಪ, ಗಂಗಾಧರಪ್ಪ, ರಾಜು, ಶಿವಶಂಕರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments