ಶಿಕ್ಷಣದಲ್ಲಿ ಬದಲಾವಣೆ ಮುಖ್ಯ
ಕ.ಪ್ರ ವಾರ್ತೆ, ಚಳ್ಳಕೆರೆ, ಮಾ. 11
ಶಿಕ್ಷಣ ರಂಗದಲ್ಲಿ ನಡೆಯುತ್ತಿರುವ ಬದಲಾವಣೆಗಳನ್ನು ಇಂದು ಗ್ರಾಮೀಣ ಮಕ್ಕಳು ಅನುಸರಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ತರುವ ಜವಾಬ್ದಾರಿ ಹೊಂದಬೇಕು ಎಂದು ಎಸ್ಟಿಎಂಸಿ ಅಧ್ಯಕ್ಷ ಶಿವಮೂರ್ತಿ ತಿಳಿಸಿದರು.
ಅವರು ತಾಲೂಕಿನ ಚನ್ನಮ್ಮನಾಗತಿಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಅತಿ ವೇಗವಾಗಿ ಬೆಳೆಯುತ್ತಿರುವ ಶಿಕ್ಷಣ ರಂಗದಲ್ಲಿ ನಗರದ ಮಕ್ಕಳ ರೀತಿಯಲ್ಲಿ ಗ್ರಾಮೀಣ ಮಕ್ಕಳು ಕಲಿಯಬೇಕು ಎಂದು ಸರ್ಕಾರ ಶಿಕ್ಷಣಕ್ಕಾಗಿ ಕೋಟಿಗಟ್ಟಲ್ಲೆ ಹಣ ಖರ್ಚು ಮಾಡುತ್ತಿದೆ. ಎಲ್ಲಾ ಮಕ್ಕಳು ಕಡ್ಡಾಯವಾಗಿ ಶಿಕ್ಷಣವನ್ನು ಕಲಿಯುವ ದೃಷ್ಟಿಯಿಂದ ಹಲವಾರು ಯೋಜನೆಗಳನ್ನು ಜಾರಿಗೆ ತರುವಲ್ಲಿ ಗ್ರಾಮೀಣ ಸಾಮಾನ್ಯ ಕುಟುಂಬದ ಮಕ್ಕಳು ಉನ್ನತ ಶಿಕ್ಷಣ ಕಲಿಯುವುದಕ್ಕೆ ಅವಕಾಶಗಳನ್ನು ಕಲ್ಪಿಸಿದೆ ಅವುಗಳ ಬಳಕೆಯಾಗಬೇಕಿದೆ ಎಂದು ನುಡಿದರು.
ಶಾಲೆಯ ಮುಖ್ಯೋಪಾಧ್ಯಾಯ ನಾಗರಾಜು ಮಾತನಾಡಿ, ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣದ ಅಗತ್ಯತೆ ಹೆಚ್ಚಿದೆ. ಇಂದು ಎಲ್ಲಾ ಕ್ಷೇತ್ರದಲ್ಲಿ ಸ್ಪರ್ಧೆಗಳು ಇರುವ ಕಾರಣ ಮಕ್ಕಳು ಉದ್ಯೋಗಕ್ಕೆ ಮಾತ್ರ ಶಿಕ್ಷಣವನ್ನು ಸೀಮಿತ ಮಾಡದೆ ತಮ್ಮ ಜೀವನ ರೂಪಿಸಿಕೊಳ್ಳುವ ದೃಷ್ಟಿಯಿಂದ ಶಿಕ್ಷಣ ಕಲಿಯುವ ಮನಸ್ಸು ಮಾಡಬೇಕು ಎಂದರು.
ಶ್ರೀನಿವಾಸಾಚಾರಿ, ಶಾರದಮ್ಮ, ಲಕ್ಷ್ಮೀ, ಚಂದ್ರಣ್ಣ, ವೀರಭದ್ರಪ್ಪ, ಬಾಲರಾಜು, ಜಿ.ಕೆ ರಾಘವೇಂದ್ರ ಇತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.