ಶಿಕ್ಷಣ ಪಡೆದರೆ ಶೋಷಣೆ ಮುಕ್ತ
ಹಿರಿಯೂರು: ಶಿಕ್ಷಣವನ್ನು ಪಡೆದು ಮುಖ್ಯವಾಹಿನಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಮಹಿಳೆಯರು ಶೋಷಣೆಯಿಂದ ಮುಕ್ತವಾಗಲು ಸಾಧ್ಯವಿದೆ ಎಂದು ವಕೀಲೆ ಮೀನಾಕ್ಷಿ ಅಭಿಪ್ರಾಯಪಟ್ಟರು.
ತಾಲೂಕಿನ ಬುರುಜಿನರೊಪ್ಪ ಗ್ರಾಮದಲ್ಲಿ ಆಯೋಜಿಸಲಾಗಿದ್ದ ವಿಶ್ವ ಮಹಿಳಾ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕಾಲಾಂತರದಿಂದಲೂ ಒಂದಲ್ಲಾ ಒಂದು ಕಾರಣಕ್ಕೆ ಮಹಿಳೆಯನ್ನು ನಾಲ್ಕು ಗೋಡೆಗಳ ಮಧ್ಯೆ ಬಂಧಿಸುವ ಪ್ರಯತ್ನ ಮಾಡಲಾಗಿದೆ. ಆಧುನಿಕ ಕಾಲದಲ್ಲಿಯೂ ಮಹಿಳೆಯರು ಶೋಷಣೆಯಿಂದ ಹೊರಬರಲು ಸಾಧ್ಯವಾಗಿಲ್ಲವೆಂದು ವಿಷಾದಿಸಿದರು.
ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸುಬ್ರಹ್ಮಣ್ಯ ಪ್ರಸಾದ್ ಮಾತನಾಡಿ, ಉತ್ತಮ ಶಿಕ್ಷಣ ಪಡೆದು ಉದ್ಯೋಗಸ್ತರಾದ ಮಹಿಳೆಯರು ಇಂದು ಸ್ವಾವಲಂಬಿಗಳಾಗಿ ಬದುಕುತ್ತಿದ್ದಾರೆ. ಶಿಕ್ಷಣ ಪಡೆದು ಸಂಘಟಿತ ಹೋರಾಟಕ್ಕೆ ಮುಂದಾದಲ್ಲಿ ಮಹಿಳೆಯ ಬದುಕಿನಲ್ಲಿ ಗುರುತರ ಬದಲಾವಣೆಗಳು ಸಂಭವಿಸುವುದು ಸಾಧ್ಯವಿದೆಯೆಂದರು.
ಜನಾರ್ಧನ್ ನಾಯಕ್, ಜೈವಂತ್, ಚಿಕ್ಕಮ್ಮ, ಗಂಗಮ್ಮ, ವನಜಾಕ್ಷ್ಮಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.