ಅಧಿಕಾರಿಗಳು ಮತದಾನ ಮಾಡಿ: ಮಹಾನಗರ ಪಾಲಿಕೆ ಆಯುಕ್ತ
ಮಂಗಳೂರು: ಜಿಲ್ಲೆಯ ಎಲ್ಲಾ ಅಧಿಕಾರಿಗಳು ಹಾಗೂ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಸಿಬ್ಬಂದಿ ಮತದಾನ ಮಾಡಬೇಕು ಎಂದು ಜಿ.ಪಂ. ಸಿಇಒ ಡಾ.ಎನ್. ವಿಜಯಪ್ರಕಾಶ್ ಹೇಳಿದ್ದಾರೆ.
ಸ್ವೀಪ್ ಕಾರ್ಯಕ್ರಮದಡಿ ಪೋಸ್ಟರ್ ಮತದಾನದ ಬಗ್ಗೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯ್ತಿನಲ್ಲಿ ನಡೆದ ಅರಿವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಪಾಲಿಕೆ ಆಯುಕ್ತ ಡಾ. ಹರೀಶ್ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿ, ಫಾರ್ಮ್ ನಂಬರ್ 6ನ್ನು ಅಧಿಕಾರಿಗಳು ಪಡೆದು ಹೆಸರು ನೋಂದಾಯಿಸುವಂತೆ ಸೂಚಿಸಿದರು.
ಎಲ್ಲ ಇಲಾಖೆಗಳು ರಶೀದಿ ನೀಡುವಾಗ ಮತದಾನದ ಬಗ್ಗೆ ಮಾಹಿತಿ ನೀಡುವ ಸೀಲ್ ಮಾಡಿ ಎಂದು ಸಲಹೆ ನೀಡಿದರು.
ಮತ ಖರೀದಿಸಲು ಸಾಧ್ಯವಿಲ್ಲ ಹಾಗೂ ಯಾವುದೇ ಆಮಿಷಕ್ಕೆ ಒಳಗಾಗದೆ ನಾನು ಮತದಾನ ಮಾಡುತ್ತೇನೆ ಎಂಬ ಅರಿವು ಮೂಡಿಸಲು ಸಾಧ್ಯವಾದರೆ ಚುನಾವಣೆ ಪ್ರಕ್ರಿಯೆ ಯಶಸ್ವಿಯಾದಂತೆ ಎಂದರು. ಚುನಾವಣೆಗೆ ಸಂಬಂಧಿಸಿದ ಯಾವುದೇ ಮಾಹಿತಿಗೆ 1077 ನಂಬರ್.ಗೆ ಕರೆ ಮಾಡಬಹುದು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಜಿಲ್ಲಾಮಟ್ಟದ ಸ್ತ್ರೀಶಕ್ತಿ ಒಕ್ಕೂಟದ ಮಹಿಳೆಯರಿಗೆ ಅರಿವು ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.