ಎಂಜಿನಿಯರಿಂಗ್ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ
ಮಂಗಳೂರು: ಯೇನೆಪೋಯ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ, ಬೋಳೂರು ಬೊಕ್ಕಪಟ್ಣ ನಿವಾಸಿ ಶ್ರೇಯ (21) ಮಾನಸಿಕ ಖಿನ್ನತೆಯಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂತಿಮ ಪದವಿ ವಿದ್ಯಾರ್ಥಿನಿ ಶ್ರೇಯಾ ಇತ್ತೀಚೆಗೆ ಖಿನ್ನತೆಯಿಂದ ಬಳಲುತ್ತಿದ್ದರು. ಸೋಮವಾರ ಬೆಳಗ್ಗೆ 6.45ಕ್ಕೆ ಕೊಣೆಯ ಫ್ಯಾನ್.ಗೆ ನೇಣುಬಿಗಿದು ಆತ್ಮಹತ್ಯೆಗೆ ಶರಣಾದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.