ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ತೆರಿಗೆ ವಂಚನೆ ಆರೋಪದ ಅರ್ಜಿ ವಜಾ, ರು. 30 ಸಾವಿರ ದಂಡ

Vishwanath S
Updated On : 2 Apr 2013, 11:10 am

ಬೆಂಗಳೂರು:  ನಗರ ಪಾಲಿಕೆಗಳು ತೆರಿಗೆ ಸಂಗ್ರಹಣೆ ಪ್ರಕ್ರಿಯೆಯಲ್ಲಿ ಜನರನ್ನು ವಂಚಿಸುತ್ತಿವೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ  ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್, ಅರ್ಜಿದಾರರಿಗೆ 30 ಸಾವಿರ ದಂಡ ವಿಧಿಸಿದೆ.
ಮಂಗಳೂರಿನ ಪಾಲಿಕೆಯ ತೆರಿಗೆ ಸಂಗ್ರಹಣೆ ಪ್ರಕ್ರಿಯೆಗೆ ಆಕ್ಷೇಪ ವ್ಯಕ್ತಪಡಿಸಿ ವಿನಾಯಕ ಬಾಳಿಗ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.  ಕರ್ನಾಟಕ ಆಸ್ತಿ ತೆರಿಗೆ ಕಾಯ್ದೆ ಅನುಸಾರ, ಪಾಲಿಕೆಗಳು ತೆರಿಗೆ ಸಂಗ್ರಹಣೆಗೆ ಮುನ್ನ ವಿಶೇಷ ಮಂಡಳಿಯನ್ನು ರಚಿಸಬೇಕು. ಅದರ ಮೂಲಕವೇ ತೆರಿಗೆಯನ್ನು ಸಂಗ್ರಹಿಸಬೇಕು. ಆದರೆ, ಯಾವುದೇ ಪಾಲಿಕೆಗಳು ಈ ನಿಯಮವನ್ನು ಪಾಲಿಸುತ್ತಿಲ್ಲ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿತ್ತು.  ಆದರೆ, ಅರ್ಜಿಯಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿಯಿಲ್ಲ. ತೆರಿಗೆ ಸಂಗ್ರಹಣೆಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂಬುದಕ್ಕೆ ಅರ್ಜಿಯಲ್ಲಿ ಯಾವುದೇ ಪುರಾವೆಗಳನ್ನು ಒದಗಿಸಲಾಗಿಲ್ಲ ಎಂದು ಅಭಿಪ್ರಾಯಪಟ್ಟ ಪೀಠ, ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೆ, ಅನಗತ್ಯ ಅರ್ಜಿಯ ಮೂಲಕ ನ್ಯಾಯಾಲಯದ ಸಮಯ ವ್ಯಯಮಾಡಿದ್ದಕ್ಕಾಗಿ  30 ಸಾವಿರ ದಂಡ ವಿಧಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement