ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಪ್ರತಿಯೊಬ್ಬರು ಮತದಾನ ಮಾಡಿ: ಡಿಸಿ

Vishwanath S
Updated On : 2 Apr 2013, 11:10 am

ಮಂಗಳೂರು: ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಪ್ರತಿಯೊಬ್ಬರು ಮತದಾನ ಮಾಡಿ, ಇದು ಎಲ್ಲರ ಕರ್ತವ್ಯ ಮತ್ತು ಹಕ್ಕಾಗಿದೆ ಎಂದು ಜಿಲ್ಲಾಧಿಕಾರಿ ಹರ್ಷಗುಪ್ತ ಹೇಳಿದ್ದಾರೆ.
ನಗರದ ಭಾರತ್.ಮಾಲ್.ನಲ್ಲಿ ಭಾನುವಾರ ಸ್ವೀಪ್ ಕಾರ್ಯಕ್ರಮದಡಡಿ ಯಕ್ಷಗಾನದ ಮೂಲಕ ಜನಜಾಗೃತಿ ಕಾರ್ಯಕ್ರಮಕ್ಕೆ ಚೆಂಡೆ ಬಾರಿಸುವುದರ ಮೂಲಕ ಚಾಲನೆ ನೀಡಿದರು.
ಕೇಂದ್ರ ಚುನಾವಣಾ ಆಯೋಗದ ಸೂಚನೆಯಂತೆ ಜಿಲ್ಲಾಡಳಿತ ಪ್ರಜಾಪ್ರಭುತ್ವ ಬಲಗೊಳ್ಳಲು ಪ್ರತಿಯೊಬ್ಬರು ಮತದಾನ ಮಾಡುವಂತೆ ಪ್ರೇರೆಪಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಸಾರ್ವಜನಿಕರು ಜಾಗೃತಿ ಕಾರ್ಯಕ್ರಮದ ಉಪಯೋಗ ಪಡೆದುಕೊಳ್ಳಬೇಕು ಎಂದರು.
ಚುನಾವಣಾ ಆಯೋಗದ ನಿರ್ದೇಶನದಂತೆ ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ಸ್ವೀಪ್ ಕಾರ್ಯಕ್ರಮದ ಕ್ರಿಯಾಯೋಜನೆ ರೂಪಿಸಿ ಜಾರಿಗೊಳಿಸಲಾಗಿದೆ ಎಂದರು.
ರೋಶನಿ ನಿಲಯ ಕಾಲೇಜಿನ ಪ್ರಾಧ್ಯಾಪಕಿ ಪ್ರೊ. ವಿನೀತಾ ಅವರ ನೇತೃತ್ವದಲ್ಲಿ ಹವ್ಯಾಸಿ ಬಳಗ ಕದ್ರಿ ಮತ್ತು ವಿದ್ಯಾರ್ಥಿಗಳು ಯಕ್ಷಗಾನ ಕಾರ್ಯಕ್ರಮ ನಡೆಸಿಕೊಟ್ಟರು.
ಜಿ.ಪಂ. ಸಿಇಒ ಡಾ. ವಿಜಯಪ್ರಕಾಶ್, ಪಾಲಿಕೆ ಆಯುಕ್ತ ಡಾ. ಹರೀಶ್, ಜನ ಶಿಕ್ಷಣ ಟ್ರಸ್ಟ್.ನ ಕೃಷ್ಣ ಮೂಲ್ಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement